
ಬೆಂಗಳೂರು, (ಮಾರ್ಚ್ 07) : ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ನಡೆದ ಜಗಳವೊಂದು ಅಂತಿಮವಾಗಿ ಗೃಹಿಣಿಯೊಬ್ಬರ ಸಾವಿನಲ್ಲಿ ಅಂತ್ಯ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (ಬೆಂಗಳೂರು) ನಡೆದಿದೆ. ಮೂರು ದಿನದ ಹಳೇ ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ ಕಿರಿಕ್ ತೆಗೆದ ಮನನೊಂದ ಪತ್ನಿ ವಿಷ ಸೇವಿಸಿ ಪ್ರಾಣಬಿಟ್ಟಿದ್ದಾಳೆ. ಮೃತ ಮಹಿಳೆಯನ್ನು ಕಾವ್ಯ (27) ಎಂದು ಗುರುತಿಸಲಾಗಿದೆ. ಈಕೆ ಕಳೆದ ಐದು ವರ್ಷಗಳ ಹಿಂದೆ ರಂಗಸ್ವಾಮಿ ಎಂಬುವವರನ್ನು ಮದುವೆಯಾಗಿದ್ದು, ಇವರಿಗೆ ನಾಲ್ಕು ವರ್ಷದ ಮಗುವಿದೆ. ಆದರೆ, ಇದೀಗ ತಾಯಿಯನ್ನು ಕಳೆದುಕೊಂಡ ಮಗು ಅನಾಥವಾಗಿದೆ.
ಪತಿಗೆ ಕಳೆದ ಮೂರು ದಿನಗಳಿಂದ ಒಂದೇ ಸಾಂಬಾರು ಬಡಿಸಿದ್ದಾಳೆ. ಫ್ರಿಡ್ಜ್ನಲ್ಲಿಟ್ಟು ಬಿಸಿ ಮಾಡಿ ಅದೇ ಸಾರನನ್ನು ಮೂರು ದಿನದಿಂದ ಬಡಿಸಿದ್ದಾಳೆ. ಎರಡು ದಿನ ಸಹಿಸಿಕೊಂಡ ಗಂಡ ಮೂರನೇ ದಿನ ಆಕ್ರೋಶಗೊಂಡಿದ್ದು, ಮೂರು ದಿನದ ಹಿಂದಿನ ಸಾರನ್ನು ಬಡಿಸುತ್ತಿದ್ದ ಎಂದು ಪತ್ನಿ ವಿರುದ್ಧ ಜಗಳಕ್ಕೆ ನಿಂತಿದ್ದಾನೆ. ಪತ್ನಿಗೆ ಹಿಗ್ಗಾಮುಗ್ಗಾ ಬೈದಿದ್ದಾನೆ. ಪತಿಯ ಆಕ್ರೋಶಭರಿತ ಬೈಗುಳಕ್ಕೆ ನೊಂದ ಪತ್ನಿ ಬದುಕನ್ನೇ ಅಂತ್ಯಗೊಳಿಸಿದ್ದಾಳೆ.
ಇದನ್ನೂ ಓದಿ: 3ನೇ ಮದ್ವೆ ಆಸೆಗೆ 2ನೇ ಗಂಡನಿಗೆ ಪರಲೋಕದ ದಾರಿ: ತನಿಖೆಯಲ್ಲಿ ಬಯಲಾಯ್ತು ಖತರ್ನಾಕ್ ಸ್ಟೋರಿ
ಪತಿಯ ನಿಂದನೆ ಹಾಗೂ ಹಲ್ಲೆಯ ಯತ್ನದಿಂದ ತೀವ್ರವಾಗಿ ಮನನೊಂದು ಕಾವ್ಯ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಕಾವ್ಯ ವಾಂತಿ ಮಾಡುತ್ತಿರುವುದನ್ನು ಗಮನಿಸಿದ ಕುಟುಂಬ ಸದಸ್ಯರು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾರೆ. ಮಾರ್ಗಮಧ್ಯದಲ್ಲೇ ಕಾವ್ಯ ಕೊನೆಯುಸಿರೆಳೆದಿದ್ದಾರೆ.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಳ ರಂಗಸ್ವಾಮಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.