ಇಶಾನಿಯ ಆಸೆಯಿಂದ ಬೆತ್ತಲೆಯಾದ ಬೆಂಗಳೂರಿನ ಯುವಕ: ಖಾತೆಯಿಂದ ಹೋಯಿತು ಲಕ್ಷ ಲಕ್ಷ ಹಣ!

ಇಶಾನಿಯ ಆಸೆಯಿಂದ ಬೆತ್ತಲೆಯಾದ ಬೆಂಗಳೂರಿನ ಯುವಕ: ಖಾತೆಯಿಂದ ಹೋಯಿತು ಲಕ್ಷ ಲಕ್ಷ ಹಣ!


ಬೆಂಗಳೂರು, ಜ.11: ಬೆಂಗಳೂರಿನ (ಬೆಂಗಳೂರು) ಯುವಕರೇ ಎಚ್ಚರ… ಹುಡುಗಿ ಚೆನ್ನಾಗಿದ್ದಾಳೆ ಎಂದು ಫೋನ್ ಎತ್ತಿದ್ರೆ, ಎಕೌಂಟ್ ನಲ್ಲಿ ಹಣ ಖಾಲಿಯಾಗುವುದು ಖಂಡಿತ. ಇಂತಹ ಮೋಸದ ಜಾಲದಿಂದ ಅದೆಷ್ಟೋ ಯುವಕರು ಬೆತ್ತಲೆ ಆಗಿರುವ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿವೆ. ಇದೀಗ ಬೆಂಗಳೂರಿನಲ್ಲಿ ಇಂತಹದೇ ಒಂದು ಘಟನೆ ನಡೆದಿದೆ. ಕರ್ನಾಟಕದಲ್ಲಿ ಡೇಟಿಂಗ್ ಅಪ್ಲಿಕೇಶನ್‌ಗಳಿಂದ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಯುವಕನೊಬ್ಬ ಡೇಟಿಂಗ್ ಅಪ್ಲಿಕೇಶನ್‌ ಡೌನ್‌ಲೋಡ್ ಮಾಡಿಕೊಂಡು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಬಳಸಿ ರಚಿಸಲಾದ “ಇಶಾನಿ” ಹೆಸರಿನ ಪ್ರೊಫೈಲ್‌ನಿಂದ ಬಂದ ರಿಕ್ವೆಸ್ಟ್‌ಗೆ ಕ್ಲಿಕ್ ಮಾಡಿದ್ದಾನೆ. ಈ “ಇಶಾನಿ” ಎಂಬ ಐ ಹುಡುಗಿ, ಯುವಕನನ್ನು ವಿವಸ್ತ್ರಗೊಳಿಸಿ, ಆ ವಿಡಿಯೋವನ್ನು ಇಟ್ಟುಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಇದರಿಂದ ಭಯಗೊಂಡ ಯುವಕ ನಕಲಿ ಖಾತೆಗೆ ಒಟ್ಟು 1.5 ಲಕ್ಷ ರೂ.ಗಳನ್ನು ವರ್ಗಾಯಿಸಿದ್ದಾನೆ.

ಈಜಿಪುರದ ಈ ಯುವಕ, ಖಾಸಗಿ ಸಂಸ್ಥೆಯಲ್ಲಿ ಕ್ಲೌಡ್ ಆಗಿ ಕೆಲಸ ಮಾಡುತ್ತಿದ್ದಾನೆ. ಜನವರಿ 5 ರಂದು ಡೇಟಿಂಗ್ ಅಪ್ಲಿಕೇಶನ್ ಆಯಪ್‌ನಲ್ಲಿ ಪ್ರೊಫೈಲ್ ರಚಿಸಿದ ತಕ್ಷಣ ಇಶಾನಿ ಎಂಬ ಯುವತಿಯಿಂದ ರಿಕ್ವೆಸ್ಟ್ ಬಂದಿದೆ. ಇಬ್ಬರು ಕೂಡ ಏಕಾಂತವಾಗಿ ಮಾತನಾಡಲು ಪ್ರಾರಂಭಿಸಿದರು. ಖಾಸಗಿ ವಿಚಾರಗಳನ್ನು ಹಂಚಿಕೊಂಡಿದ್ದರು. ನಂತರ ಈ ಇಬ್ಬರು ಕೂಡ ಮೊಬೈಲ್ ಶೇರ್ ನಂಬಿ ಅಲ್ಲಿಯೂ ಮಾತನಾಡಲು ಶುರು ಮಾಡಿಕೊಂಡಿದ್ದರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅದೇ ದಿನ ಈ ಯುವಕನಿಗೆ ಯುವತಿ ಕಡೆಯಿಂದ ವಿಡಿಯೋ ಕಾಲ್ ಬಂದಿದೆ. ಬಟ್ಟೆಯನ್ನು ಬೆಚ್ಚಿ, ಆತನ ಮುಂದೆ ಬೆತ್ತಲೆಯಾಗಿದ್ದಾಳೆ. ನೀನು ಬಟ್ಟೆ ಬಿಚ್ಚು ಎಂದು ಹೇಳಿ, ಅವನ ಬೆತ್ತಲೆ ಮಾಡಿದ್ದಾಳೆ. ಆತನ ಕೂಡ ಹುಡುಗಿಯ ತೆವಲಿನಲ್ಲಿ ಬಟ್ಟೆಯನ್ನು ಬಿಚ್ಚಿದ್ದಾನೆ. ವಿಡಿಯೋ ಕರೆ ಕೊನೆಗೊಳ್ಳುತ್ತದೆ. ಅಲ್ಲಿಯವರೆಗೆ ತಾನು ಮತ್ತು ಆಕೆ ಬೆತ್ತಲೆ ಆಗಿರುವ ವಿಡಿಯೋ ರೆಕಾರ್ಡ್ ಆಗಿದೆ ಎಂಬುದು ಆತನಿಗೆ ತಿಳಿದಿರುವುದಿಲ್ಲ. ಸ್ವಲ್ಪ ಸಮಯದ ನಂತರ, ಟೆಕ್ಕಿಗೆ ವೀಡಿಯೊ ಕರೆಯುವ ಸಮಯದಲ್ಲಿ ಸೆರೆಹಿಡಿಯಲಾದ ತನ್ನ ಖಾಸಗಿ ಚಿತ್ರಗಳ ಬಗ್ಗೆ ಸಂದೇಶ ಬಂದಿದೆ. ಈ ವೇಳೆ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಒಂದು ವೇಳೆ ಹಣ ನೀಡದಿದ್ದರೆ ಈ ವಿಡಿಯೋವನ್ನು ನಿನ್ನ ಸ್ನೇಹಿತರು, ಕುಟುಂಬಕ್ಕೆ ಕಳುಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವೆ ಎಂದು ಹೇಳಿದ್ದಾಳೆ. ಇದರಿಂದ ಭಯಗೊಂಡ ಯುವಕ ಮೊದಲು 60 ಸಾವಿರ ಹಾಗೂ ನಂತರ 93,000 ರೂ.ಗಳನ್ನು ಕಳುಹಿಸಿದ್ದಾನೆ. ಇಷ್ಟು ಹಣ ನೀಡಿದ ನಂತರವೂ ಮತ್ತೆ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ.

ಇದನ್ನೂ ಓದಿ: ಸ್ಯಾಂಡಲ್ವುಡ್ ನಟಿ, ಉದ್ಯಮಿ ನಂಟಿನ ಕೇಸ್ಗೆ ಬಿಗ್ ಟ್ವಿಸ್ಟ್: ಮಹತ್ವದ ಸಾಕ್ಷ್ಯ ಲಭ್ಯ

ಇದರಿಂದ ಬೇಸತ್ತು ಯುವಕ ತನ್ನ ಸ್ನೇಹಿತನಿಗೆ ಎಲ್ಲ ವಿಷಯ ಹೇಳಿದ್ದಾನೆ. ನಂತರ ಪೊಲೀಸರಿಗೆ ದೂರು ನೀಡಿದ್ದಾನೆ. ಅವರ ದೂರಿನ ಆಧಾರದ ಮೇಲೆ, ಸೈಬರ್ ಅಪರಾಧ ಪೊಲೀಸ್ ಠಾಣೆಯು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ವಿಭಾಗಗಳು ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 308 (ಸುಲಿಗೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಪತ್ತೆ ಮಾಡಲು ತನಿಖೆ ಆರಂಭಿಸಿದ್ದಾರೆ. ಇನ್ನು ಈ ವಂಚನೆಗಾಗಿ ಈ ವಿಡಿಯೋವನ್ನು ಬಳಸಲಾಗಿದೆ ಎಂದು ಹೇಳಲಾಗಿದೆ. ಡೇಟಿಂಗ್ ಅಪ್ಲಿಕೇಶನ್‌ಗೆ ಸಂಬಂಧಿಸಿದ ಕಿರುಕುಳ ಪ್ರಕರಣಗಳು ಹೆಚ್ಚುತ್ತಿವೆ ಮತ್ತು ಆನ್‌ಲೈನ್‌ನಲ್ಲಿ ಅಪರಿಚಿತರೊಂದಿಗೆ ಸಂವಹನ ನಡೆಸುವಾಗ ಬಳಕೆದಾರರು ಜಾಗರೂಕರಾಗಿರುತ್ತಾರೆ ಎಂದು ಈ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *