ಸಾರ್ವಜನಿಕರ ಪ್ರಾಣ ತೆಗೆಯಲು ಕಾಯುತ್ತಿದೆ ಈ ರಸ್ತೆ: ತೆರೆದ ಗುಂಡಿಯಲ್ಲಿ ಬಿದ್ದು ಕೈಕಾಲು ಮುರಿದುಕೊಂಡ ಜನ

ಸಾರ್ವಜನಿಕರ ಪ್ರಾಣ ತೆಗೆಯಲು ಕಾಯುತ್ತಿದೆ ಈ ರಸ್ತೆ: ತೆರೆದ ಗುಂಡಿಯಲ್ಲಿ ಬಿದ್ದು ಕೈಕಾಲು ಮುರಿದುಕೊಂಡ ಜನ


ದೇವನಹಳ್ಳಿ, ಫೆ.24: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ಬೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯ ಅತಿರೇಕಕ್ಕೆ ತಲುಪಿದೆ. ಭೂಗತ ಕೇಬಲ್ ಅಳವಡಿಕೆ ಹೆಸರಿನಲ್ಲಿ ಪಟ್ಟಣದ ಹೃದಯ ಭಾಗಕ್ಕೆ ತೆಗೆದಿರುವ ಗುಂಡಿಗಳನ್ನು ಮುಚ್ಚದೆ ಹಾಗೆಯೇ ಬಿಡಲಾಗುತ್ತಿದೆ, ಪಾದಚಾರಿಗಳು ಹಾಗೂ ವಾಹನ ಸವಾರರು ಪ್ರತಿನಿತ್ಯ ಅಪಘಾತಕ್ಕೀಡಾಗುತ್ತಿದ್ದಾರೆ. ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಒಂದು ಟ್ರಾನ್ಸ್‌ಫಾರ್ಮರ್‌ನಿಂದ ಮತ್ತೊಂದಕ್ಕೆ ಕೇಬಲ್ ಅಳವಡಿಸಲು ನಾಲ್ಕೈದು ಅಡಿ ಆಳದ ಗುಂಡಿಗಳನ್ನು ತೊಡಿಸಲಾಗಿದೆ. ಕೆಲಸ ಮುಗಿದರೂ ಗುಂಡಿಗಳನ್ನು ಮುಚ್ಚದೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಕಳೆದ ಎರಡು ಮೂರು ವಾರಗಳಿಂದ ಈ ಗುಂಡಿಗಳು ತೆರೆದ ಸ್ಥಿತಿಯಲ್ಲೇ ಇವೆ. ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನಾಗಲಿ ಅಥವಾ ಬ್ಯಾರಿಕೇಡ್‌ಗಳನ್ನಾಗಲಿ ಹಾಕದೆ ನಿರ್ಲಕ್ಷ್ಯ ತೋರಲಾಗಿದೆ. ರಾತ್ರಿ ವೇಳೆ ಹಾಗೂ ಜನನಿಬಿಡ ಸಮಯದಲ್ಲಿ ಅನೇಕ ಮಹಿಳೆಯರು ಮತ್ತು ಮಕ್ಕಳು ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ. ಸ್ಥಳೀಯರು ಹತ್ತಾರು ಬಾರಿ ದೂರು ನೀಡಿದರೂ ಬೆಸ್ಕಾಂ ಸಿಬ್ಬಂದಿ ಮಾತ್ರ ಎಚ್ಚೆತ್ತುಕೊಂಡಿಲ್ಲ. ಯಾವುದಾದರೂ ದೊಡ್ಡ ಅನಾಹುತ ಸಂಭವಿಸುವವರೆಗೆ ಅಧಿಕಾರಿಗಳು ಕಾಯುತ್ತಿದ್ದಾರೆ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಕೂಡಲೇ ಈ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ನೀಡಿ ಪಟ್ಟಣದ ನಿವಾಸಿಗಳು ಒತ್ತಾಯಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *