
ಲಿಂಗರಾಜು ಅವರಿಗೆ ಅವರು ಸಲ್ಲಿಸಿದ್ದ ಸೇವೆಗಾಗಿ ಬರಬೇಕಾಗಿದ್ದ ಈ ಆರ್ಥಿಕ ಸವಲತ್ತುಗಳನ್ನು ಪಡೆಯುವುದಕ್ಕೆ ಬಿಇಒ ನಾಗೇಂದ್ರಪ್ಪ ಮತ್ತು ಮಧ್ಯವರ್ತಿ ಮಂಜುನಾಥ 4 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ
ಈ ಬಗ್ಗೆ ಲಿಂಗರಾಜು ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಹೀಗಾಗಿ ಪ್ಲಾನ್ ಮಾಡಿ ಶಿವಮೊಗ್ಗ ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪೂರೆ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳು 1 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬೀಳುವಂತೆ ಮಾಡಿದ್ದಾರೆ.
ಇದನ್ನೂ ಓದಿ: ಕಲಬುರಗಿಯಲ್ಲಿ ಕಳ್ಳಿಯರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆ: ಬೀಗ ಹಾಕಿದ ಮನೆಗಳಿಗೆ ಕನ್ನ ಹಾಕುತ್ತಿದ್ದ ಲೇಡಿ ಗ್ಯಾಂಗ್