
ಶಿವಮೊಗ್ಗ, ಮಾರ್ಚ್ 30: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳದಲ್ಲಿ ನಡೆದಿದೆ. ಬಸ್ಸಿನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದರೆ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಗಾಯಾಳುಗಳಿಗೆ ಭದ್ರಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ಬಸ್ ಹೊರಟ್ಟಿತ್ತು. ಮಾರ್ಗ ಮಧ್ಯೆ ಅವಘಡ ಸಂಭವಿಸಿದೆ. ಭದ್ರ ಗ್ರಾಮಾಂತರ ಠಾಣಾವತಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.