
ಬೀದರ್, ಮಾರ್ಚ್ 23: ತಮ್ಮ ಹೊಲದಲ್ಲಿ ಬಿತ್ತಿದ ಬೆಳೆ ಪ್ರಕೃತಿ ವಿಕೋಪಕ್ಕೆ ತುತ್ತಾದರೆ ಅನೂಕುಲವಾಗಲಿ ಅಂತಾ ನೂರಾರು ರೈತರು ತಮ್ಮ ಪೈರಿಗೆ ಬೆಳೆ ವಿಮೆ (ಬೆಳೆ ವಿಮೆ) ಮಾಡಿದರು. ಕೃಷಿ ಇಲಾಖೆ ಅಧಿಕಾರಿಗಳು ನಿರ್ದೇಶನದ ಪ್ರತಿ ವರ್ಷ ಇಂತಿಷ್ಠು ಅಂತಾ ಹಣವನ್ನ ಪತ್ತಿನ ಸಹಕಾರಿ ಸಂಘಕ್ಕೆ ಕಟ್ಟ ಬಂದಿದ್ದರು. ಆದರೆ ಆ ರೈತರಿಗೆ ನ್ಯಾಯಯುತವಾಗಿ ಬರಬೇಕಾಗಿರುವುದು ಬೆಳೆ ವಿಮೆ ಮಾತ್ರ ಬರುತ್ತಿಲ್ಲ. ಹೀಗಾಗಿ ರೈತರು ಕಂಗಾಲಾಗಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಎರಡು ಲಕ್ಷ ನಾಲ್ಕು ಸಾವಿರ 19 ಜನ ರೈತರು ಈ ಕಳೆದ ವರ್ಷ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಬೆಳೆ ವಿಮೆ ಮಾಡಿದ್ದಾರೆ. ಆದರೆ ಇಲ್ಲಿಯವರೆಗೂ ರೈತರ ಬೆಳೆ ಹಾನಿಯ ವಿಮೆ ಹಣ ಮಾತ್ರ ರೈತರ ಕೈಸೇರಿಲ್ಲ. ರೈತರ ಗೋಳು ಯಾರು ಕೇಳೋರೆ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ: ಕಾರ್ಖಾನೆಗಳಿಗೆ ಸಿಹಿ ಕೊಟ್ಟ ಅನ್ನದಾತರ ಬಾಯಿಗೆ ಕಹಿ: ಸಂಕಷ್ಟಕ್ಕೆ ಸಿಲುಕಿದ ಬೀದರ್ ಕಬ್ಬು ಬೆಳೆಗಾರರು
ರೈತರಿಂದ ಸಾವಿರಾರು ರೂ ಬೆಳೆ ವಿಮೆ ಮಾಡಿಸಿಕೊಂಡು ಈಗ ರೈತರಿಗೆ ಹಣವನ್ನ ಕೊಡದೆ ಬಡ ರೈತರ ಬದುಕಿನ ಜೊತೆಗೆ ಆಟವಾಡುತ್ತಿದ್ದಾರೆ. ಇನ್ನೂ ಹಲವು ವರ್ಷಗಳಿಂದ ರೈತರು ಬೆಳೆದ ಬೆಳೆ ವಿಕೋಪದಿಂದ ಬೆಳೆ ಹಾನಿಯಾದರೆ ಬೆಳೆ ವಿಮೆಯಿಂದಾದರೂ ಬೆಳೆ ನಷ್ಟಕ್ಕೆ ಪರಿಹಾರ ಸಿಗುತ್ತದೆ ಅನ್ನೋ ದೃಷ್ಟಿಯಿಂದ ಈ ವರ್ಷ ಬೀದರ್ನಲ್ಲಿ 2 ಲಕ್ಷ 4 ಸಾವಿರ 19 ಜನರ ವಿವಿಧ ಬೆಳೆ ಬೆಳೆ ವಿಮೆ ಮಾಡಿದ್ದು, ಬೆಳೆ ವಿಮೆ ಸಂಸ್ಥೆಗೆ 9 ಕೋಟಿ 90 ಲಕ್ಷ ರೂ. ಬೀದರ್ ರೈತರು ಕಟ್ಟಿದ್ದಾರೆ. ಆದರೆ ಈ ವರ್ಷ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ನಾಲ್ಕೂವರೆ ಲಕ್ಷ ರೂಪಾಯಿಗಳಷ್ಟು 300 ಕೋಟಿಗೂ ಅಧಿಕ ಹಾನಿಯಾಗಿದೆ. ಆದರೆ ಬೆಳೆ ವಿಮೆ ಮಾಡಿದ ಕೆವಲ 78 ಸಾವಿರ ರೈತರಿಗೆ 36.74 ಕೋಟಿ ರೂಪಾಯಿ ಮಾತ್ರ ಬೆಳೆ ವಿಮೆ ಹಣ ನೀಡಿದ್ದು, ಒಂದು ಲಕ್ಷ 38 ಸಾವಿರ ರೈತರಿಗೆ ಬೆಳೆ ಹಾನಿ ಪರಿಹಾರ ಕೊಡದೆ ವಿಮೆ ಕಂಪನಿ ಮೋಸ ಮಾಡಿದೆ ಎಂದು ರೈತರು ಹೇಳುತ್ತಿದ್ದಾರೆ.
ರೈತರ ಕೈಸೇರಿದ ಹಣ
ಜಿಲ್ಲೆಯ ಕೃಷಿ ಅಧಿಕಾರಿಗಳ ಮಾರ್ಗದರ್ಶನದ ಸಹಾಯಕ ಆಯಾ ಹೋಬಳಿ ವ್ಯಾಪ್ತಿಯಲ್ಲಿರುವ ಕೃಷಿ ಪತ್ತಿನ ಸಹಕಾರಿಗಳಲ್ಲಿ ತಮ್ಮ ಬೆಳೆಗೆ ಬೆಳೆ ವಿಮೆಯನ್ನ ಮಾಡಿ ಅಲ್ಲಿಯೇ ಹಣವನ್ನು ತುಂಬುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು. ಕೃಷಿ ಇಲಾಖೆಯ ಸಲಹೆಯಂತೆ ಬ್ಯಾಂಕ್ನಲ್ಲಿ ಹಣ ಸಂದಾಯ ಮಾಡಿ ರಸೀದಿ ಪಡೆದಿದ್ದಾರೆ. ಆದರೆ ಸಂಕಷ್ಟದ ಪರಿಸ್ಥಿತಿಯಲ್ಲಿ ಬೆಳೆ ಹಾನಿಯಾದಾಗ ಕೈಸೇರಬೇಕಾದ ಹಣವೇ ಈಗ ರೈತರಿಗೆ ಬರುತ್ತಿಲ್ಲ. ಇದು ಸಹಜವಾಗಿಯೇ ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಇದು ಒಂದೇ ಗ್ರಾಮದ ಕಥೆಯಲ್ಲ. ಬೀದರ್ ಜಿಲ್ಲೆಯಲ್ಲಿ ಸಾವಿರಾರು ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಹಣವೇ ಶೇಕಡಾ 80ರಷ್ಟು ರೈತರಿಗೆ ಬಂದಿಲ್ಲ. ಅವರು ಪ್ರತಿ ವರ್ಷ ಕೂಡ ಹಣ ಕಟ್ಟುತ್ತಲೇ ಇದ್ದಾರೆ. ಆದರೆ ಬೆಳೆ ವಿಮೆ ಹಣ ಬಾರದಿರುವುದು ರೈತರನ್ನ ಗಾಬರಿಗೊಳಿಸಿದೆ. ಸಾಲ ಸೋಲ ಮಾಡಿ ವಿಮೆ ಕಟ್ಟಿದವೂ ಇಲ್ಲಾ, ಜೊತೆಗೆ ಬೆಳೆ ನಾಶವಾಗಿರುವುದಕ್ಕೆ ಇನ್ಶೂರೆನ್ಸ್ ಕೂಡ ಬಾರದಿರುವುದು ಅಧಿಕಾರಿಗಳ ವಿರುದ್ಧ ರೈತರು ತಿರುಗಿ ಬಿದ್ದಿದ್ದಾರೆ.
ರೈತರು ಆಕ್ರೋಶ
ಸಾಲ ಸೋಲ ಮಾಡಿ ಬಿತ್ತಿದ ಬೆಳೆ ನಾಶವಾದರೆ ಬೆಳೆ ವಿಮೆಯಲ್ಲಾದರೂ ಮರಳಿ ಹಣಬರಬಹುದೆಂದುಕೊಂಡಿದ್ದ ರೈತರು ಆಕ್ರೋಶಗೊಂಡಿದ್ದಾರೆ. ಕೂಡಲೇ ನಮ್ಮ ಬೆಳೆ ವಿಮೆ ಹಣ ಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ಕೆಲವು ರೈತರಿಗೆ ಬೆಳೆ ವಿಮೆ ಹಣ ಹಾಕಿ, ಕೆಲವು ರೈತರಿಗೆ ಹಣ ಹಾಕದೆ ಇರೋದು ರೈತರ ಅಸಮಾಧಾನ ಹೆಚ್ಚಿಸುವಂತೆ ಮಾಡಿದೆ.
ಇದನ್ನೂ ಓದಿ; ಕಬ್ಬಿಗೆ ಗುಡ್ ಬಾಯಿ ಹೇಳಿ ಬಹುಬೇಡಿ ಮುಖಮಾಡಿದ ಗಡಿ ಜಿಲ್ಲೆ ರೈತರು: ಕೈತುಂಬಾ ಲಾಭ
ಬೆಳೆ ವಿಮೆಯ ಹೆಸರಿನಲ್ಲಿ ರೈತರ ಹಣವನ್ನ ನುಂಗಿ ನೀರು ಕುಡಿಯುತ್ತಿರುವ ಅಧಿಕಾರಿಗಳ ವಿರುದ್ಧ ಬೀದರ್ ರೈತರು ಆಕ್ರೋಶಗೊಂಡಿದ್ದಾರೆ. ಸಾವಿರಾರು ರೂಪಾಯಿ ಹಣವನ್ನ ಬ್ಯಾಂಕ್ ಖಾತೆಗೆ ಜಮಾ ಮಾಡಿದ ರೈತರಿಗೆ ಬೆಳೆವಿಮೆ ಬಾರದಿರುವುದಕ್ಕೆ ಯಾರು ಹೊಣೆ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.