ಅರ್ಧ ಶತಕ ಕಳೆದರೂ ಈ ಜನಾಂಗಕ್ಕೆ ಸಿಕ್ಕಿಲ್ಲ ಸೂರು! ಮೂಲಭೂತ ಹಕ್ಕುಗಳಿಲ್ಲದೆ ಗುಡಿಸಲಲ್ಲಿ ಬದುಕುತ್ತಿದೆ ಹಕ್ಕಿಪಿಕ್ಕಿ ಸಮುದಾಯ

ಅರ್ಧ ಶತಕ ಕಳೆದರೂ ಈ ಜನಾಂಗಕ್ಕೆ ಸಿಕ್ಕಿಲ್ಲ ಸೂರು! ಮೂಲಭೂತ ಹಕ್ಕುಗಳಿಲ್ಲದೆ ಗುಡಿಸಲಲ್ಲಿ ಬದುಕುತ್ತಿದೆ ಹಕ್ಕಿಪಿಕ್ಕಿ ಸಮುದಾಯ


ಅರ್ಧ ಶತಕ ಕಳೆದರೂ ಈ ಜನಾಂಗಕ್ಕೆ ಸಿಕ್ಕಿಲ್ಲ ಸೂರು!

ಬೀದರ್, ಜನವರಿ 20: ಲಭ್ಯದಿಂದ ಸ್ವಂತ ಸೂರಿಲ್ಲದೆ ಗುಡಿಸಲಿನಲ್ಲೇ ಬದುಕು ಸಾಗಿಸುತ್ತಿರುವ ಅಲೆಮಾರಿ ಹಕ್ಕಿಪಿಕ್ಕಿ ಜನಾಂಗದ ಸ್ಥಿತಿ ಮಾನವೀಯತೆ ಪ್ರಶ್ನಿಸಿದೆ. ಬೀದರ್ (ಬೀದರ್) ಜಿಲ್ಲೆಯ ಔರಾದ್ ಪಟ್ಟಣದಲ್ಲಿ ಇನ್ನೂರಕ್ಕೂ ಹೆಚ್ಚು ಕುಟುಂಬಗಳು ಕಳೆದ 50 ವರ್ಷಗಳಿಂದ ಚಿಕ್ಕ ಚಿಕ್ಕ ಗುಡಿಸಲುಗಳಲ್ಲಿ ವಾಸಿಸುತ್ತಿವೆ. ಚಳಿ, ಮಳೆ, ಬೇಸಿಗೆ ಎನ್ನದೆ ಅದೇ ಗುಡಿಸಲು ಇವರಿಗೆ ಏಕೈಕ ಆಸರೆಯಾಗಿವೆ.

ಅನಾರೋಗ್ಯದಿಂದ ಬಳಲುತ್ತಿರುವ ಮಕ್ಕಳು, ಮಹಿಳೆಯರು

ಮತದಾರರ ಚೀಟಿ, ಆಧಾರ್ ಕಾರ್ಡ್, ಪಡಿತರ ಚೀಟಿ ಇದ್ದರೂ ಈ ಕುಟುಂಬಗಳಿಗೆ ಇದುವರೆಗೂ ಸ್ವಂತ ಮನೆ ಅಥವಾ ನಿವೇಶನ ಲಭ್ಯವಿಲ್ಲ. ವಿದ್ಯುತ್, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಚರಂಡಿ ದುರ್ವಾಸನೆ, ಅಸ್ವಚ್ಛ ಪರಿಸರದಿಂದಾಗಿ ಮಕ್ಕಳು ಮತ್ತು ಮಹಿಳೆಯರು ನಿತ್ಯವೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಪೌಷ್ಠಿಕ ಆಹಾರದ ಕೊರತೆಯಿಂದ ಅನೇಕ ಮಕ್ಕಳು ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ.

ಮರಗೆಮ್ಮ ದೇವಿಯ ಮೂರ್ತಿಯನ್ನು ತಲೆಯ ಮೇಲೆ ಹೊತ್ತು ಭಿಕ್ಷೆ ಬೇಡುವುದೇ ಈ ಸಮುದಾಯದ ಪ್ರಧಾನ ಜೀವನೋಪಾಯವಾಗಿದೆ. ಬಡತನದ ಕಾರಣ ಸಾವಿರಾರು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ಸಮುದಾಯದಲ್ಲಿ ಶಿಕ್ಷಣ ಪಡೆದವರೇ ಇಲ್ಲ ಎಂದು ಮತ್ತೊಂದು ಕಟುವಾಸ್ತವ. ಸೂರಿಗಾಗಿ ಹಲವು ಬಾರಿ ಪುರಸಭೆ, ತಹಶಿಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದನೆ ಸಿಕ್ಕಿಲ್ಲ ಸ್ಥಳೀಯರ ಆರೋಪ. ವಸತಿ ಹಕ್ಕನ್ನು ಇಂದು ಔರಾದ್ ತಹಶಿಲ್ದಾರ್ ಕಛೇರಿಯ ಮುಂದೆ ಹಕ್ಕಿಪಿಕ್ಕಿ ಜನಾಂಗದ ಪ್ರತಿಭಟನೆ ನಡೆಸಿದ್ದು, ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂಬ ಆಗ್ರಹ ಹೆಚ್ಚುತ್ತಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *