Headlines

ಓದುತ್ತಿದ್ದ ಶಾಲಾ ಕಟ್ಟಡದಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ?

ಓದುತ್ತಿದ್ದ ಶಾಲಾ ಕಟ್ಟಡದಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ?


ಓದುತ್ತಿದ್ದ ಶಾಲಾ ಕಟ್ಟಡದಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ?

ಬೀದರ್, ಮಾರ್ಚ್ 11: ಶಾಲಾ ಕಟ್ಟಡದಿಂದ ಜಿಗಿದು 16 ವರ್ಷದ ಬಾಲಕಿ ಆತ್ಮಹತ್ಯೆ (ಸಾವು) ಮಾಡಿಕೊಂಡಿರುವಂತಹ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಮದಿಯಾ ನಶೀರ್ ಪಾಷಾ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭೇಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹಪಾಠಿವ್ ಮಾಡುವಂತೆ ಕಿರುಕುಳ ನೀಡಿದ್ದಕ್ಕೆ ಮದಿಯಾ ನಶೀರ್ ಪಾಷಾ ಆತ್ಮಹತ್ಯೆ ಮಾಡಿಕೊಂಡ ಟಿವಿ9ಗೆ ಮೃತ ಮದಿಯಾ ಚಿಕ್ಕಪ್ಪ ಎಂ.ಡಿ.ಯೂಸುಫ್ ಹೇಳಿಕೆ ನೀಡಿದ್ದಾರೆ. ಸಹಪಾಠಿ ಬಾಲಕಿಗೆ ಚುಡಾಯಿಸಿದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿವೆ.

19.70 ಲಕ್ಷ ಮೌಲ್ಯದ 38 ಕೆಜಿ ಗಾಂಜಾ: ಇಬ್ಬರ ಬಂಧನ

ತೆಲಂಗಾಣದಿಂದ ಸಂತಪುರಕ್ಕೆ ಬೈಕ್‌ನಲ್ಲಿ ಸಾಗಿಸುತ್ತಿದ್ದ 38 ಕೆಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಸಂತಪುರಕ್ಕೆ ಸಾಗಿಸುವಾಗ ಆರೋಪಿಗಳನ್ನು ಬಂಧಿಸಲಾಗಿದೆ, 19.70 ಲಕ್ಷ ಮೌಲ್ಯದ 38 ಗಾಂಜಾ ಜಪ್ತಿ ಮಾಡಲಾಗಿದೆ. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮಕ್ಕಳ ಕಳ್ಳರು ಎಂದು ಶಂಕಿಸಿ ಸ್ವಾಮೀಜಿಗಳ ಮೇಲೆ ಹಲ್ಲೆಗೆ ಯತ್ನ

ಬೀದರ್ ತಾಲ್ಲೂಕಿನ ಚಟ್ನಳ್ಳಿ ಗ್ರಾಮದ ಮಕ್ಕಳ ಕಳ್ಳರ ವದಂತಿ ಹಿನ್ನೆಲೆ ಸ್ವಾಮೀಜಿಗಳ ಮೇಲೆ ಹಲ್ಲೆ ಯತ್ನ ನಡೆದ ಘಟನೆ ನಡೆದಿದೆ. ಭಿಕ್ಷಾಟನೆಗಾಗಿ ಗ್ರಾಮಕ್ಕೆ ಬಂದಿದ್ದ ಇಬ್ಬರು ಸ್ವಾಮೀಜಿಗಳನ್ನು ಮಕ್ಕಳ ಕಳ್ಳರು ಎಂದು ಶಂಕಿಸಿದ ಗ್ರಾಮಸ್ಥರು, ಅವರ ಕಾರನ್ನು ಸುತ್ತುವರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸ್ವಾಮೀಜಿಗಳು ಹಾಗೂ ಅವರಿದ್ದ ಚಾಲಕರ ಮೇಲೆ ಹಲ್ಲೆ ನಡೆಸಲು ಗ್ರಾಮಸ್ಥರು ಯತ್ನಿಸಿದ್ದಾರೆ.

ಇದನ್ನೂ ಓದಿ: ಸೆಕೆಯೆಂದು ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು: ಸಾವಲ್ಲೂ ಒಂದಾದ ಆಪ್ತ ಸ್ನೇಹಿತರು

ಘಟನೆಯ ಕುರಿತು ಮಾಹಿತಿ ತಿಳಿಯಬೇಕಾದರೆ ಸ್ಥಳಕ್ಕೆ ಆಗಮಿಸಿದ ಪರಿಸ್ಥಿತಿಯನ್ನು ನಿಯಂತ್ರಿಸಲಾಗಿದೆ. ಬಳಿಕ ಇಬ್ಬರು ಸ್ವಾಮೀಜಿಗಳನ್ನು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮನ್ನಳ್ಳಿ ಪೊಲೀಸ್ ಠಾಣೆ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *