ಜೋಧಪುರ, ನವೆಂಬರ್ 2: ರಾಜಸ್ಥಾನ ಜೋಧಪುರದಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದ ಟ್ರಕ್ವೊಂದಕ್ಕೆ ಟೆಂಪೋ ಟ್ರಾವಲರ್ ಗಾಡಿ ಗುದ್ದಿದ ಘಟನೆ ಸಂಭವಿಸಿದೆ. ಈ ದುರಂತದಲ್ಲಿ 15ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಆರಂಭಿಕ ವರದಿಗಳು ಹೇಳುತ್ತಿವೆ. ಜೋಧಪುರ್ನ ಫಲೋದಿಯಲ್ಲಿನ ಮಾತೋಡ ಗ್ರಾಮದ ಸಮೀಪದ ಭಾರತ್ ಮಾಲಾ ಎಕ್ಸ್ಪ್ರೆಸ್ ಬಳಿ ಸಂಭವಿಸಿದ ಈ ಅಪಘಾತದಲ್ಲಿ ಸಂಭವಿಸಿದ ಸಂಖ್ಯೆಯೂ ಹಲವಿದೆ.
ಕೆಲ ಪ್ರಕಾರ ಅಪಘಾತದಲ್ಲಿ ಕನಿಷ್ಠ 18 ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರೆಂದು ಹೇಳಲಾಗುತ್ತಿದೆ. ಬಿಕಾನೆರ್ನ ಕೊಲಾಯತ್ ಮಂದಿರಕ್ಕೆ ಭೇಟಿ ನೀಡಿ ಅವರು ಜೋಧಪುರಕ್ಕೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚುವರಿ ಶುಶ್ರೂಷೆಗಾಗಿ ಗಾಯಾಳುಗಳನ್ನು ಗ್ರೀನ್ ಕಾರಿಡಾರ್ ಮೂಲಕ ಜೋಧಪುರ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ವರದಿಗಳು ಹೇಳುತ್ತಿವೆ.
ರಾಜಸ್ಥಾನ ಸಿಎಂ ಭಜನ್ಲಾಲ್ ಶರ್ಮಾ ಅವರು ಘಟನೆಗೆ ತೋರಿಸಿದ್ದು, ಮೃತರ ಸಾವಿಗೆ ಶೋಕ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸರಿಯಾಗಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.
‘ಮೃತರ ಕುಟುಂಬಗಳಿಗೆ ನನ್ನ ಸಂತಾಪ ಇರುತ್ತದೆ. ಎಲ್ಲಾ ಗಾಯಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ಮೃತರ ಆತ್ಮಗಳಿಗೆ ಸದ್ಗತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದೂ ಪ್ರಾರ್ಥಿಸುತ್ತೇನೆ’ ಎಂದು ರಾಜಸ್ಥಾನ ಮುಖ್ಯಮಂತ್ರಿಗಳು ತಮ್ಮ ಎಕ್ಸ್ ಪೋಸ್ಟ್ನಲ್ಲಿ.