Headlines

ನವವಿವಾಹಿತೆ ಸೂಸೈಡ್ ಕೇಸ್​ಗೆ ಬಿಗ್ ಟ್ವಿಸ್ಟ್: ನಾಗಪುರದಲ್ಲಿ ಆತ್ಮಹತ್ಯೆಗೆ ಶರಣಾದ ಗಾನವಿ ಪತಿ ಸೂರಜ್!

ನವವಿವಾಹಿತೆ ಸೂಸೈಡ್ ಕೇಸ್​ಗೆ ಬಿಗ್ ಟ್ವಿಸ್ಟ್: ನಾಗಪುರದಲ್ಲಿ ಆತ್ಮಹತ್ಯೆಗೆ ಶರಣಾದ ಗಾನವಿ ಪತಿ ಸೂರಜ್!


ನಾಗಪುರದಲ್ಲಿ ಆತ್ಮಹತ್ಯೆಗೆ ಶರಣಾದ ಗಾನವಿ ಪತಿ ಸೂರಜ್!

ಬೆಂಗಳೂರು, ಡಿಸೆಂಬರ್ 27: ಬೆಂಗಳೂರು ನವವಿವಾಹಿತೆ ಗಾನವಿ (26) (ಗಾನವಿ ಆತ್ಮಹತ್ಯೆ ಪ್ರಕರಣ)ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ. ಎರಡು ತಿಂಗಳ ಹಿಂದೆಯೇ ಸೂರಜ್ ಅವರನ್ನು ವರಿಸಿದ್ದರು ಗಾನವಿ ಆತ್ಮಹತ್ಯೆಗೆ ಯತ್ನಿಸಿ, ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಆಕೆಯ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿರುವುದರೊಂದಿಗೆ ಆತನ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿರುವುದು ಈ ಪ್ರಕರಣಕ್ಕೆ ಹೊಸ ತಿರುವು ತಂದಿದೆ.

ಮರ್ಯಾದೆಗೆ ಅಂಜಿ ಸೂರಜ್ ಆತ್ಮಹತ್ಯೆ

ಗಂಡನೊಂದಿಗೆ ಮನಸ್ತಾಪ ಮಾಡಿಕೊಂಡು ಪಾಲಕರ ಮನೆಗೆ ಮರಳಿದ್ದ ಗಾನವಿ, ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಳಾಗಿದ್ದ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಬ್ರೈನ್ ಡೆಡ್ ಆಗಿದ್ದ ಕಾರಣ ಕೊನೆಯುಸಿರೆಳೆದಿದ್ದರು. ಇದೀಗ ಮಹಾರಾಷ್ಟ್ರದಲ್ಲಿ ಸೂರಜ್ ಮೃತ ಸ್ಥಿತಿಯಲ್ಲಿ ಇರುವುದು ಅಚ್ಚರಿ ಮೂಡಿಸಿದೆ. ಗಾನವಿಯ ಸಾವಿನ ಬಳಿಕ ಸೂರಜ್ ತಾಯಿ ಜಯಂತಿ ಹಾಗೂ ಸಹೋದರ ಸಂಜಯ್ ಜೊತೆ ನಾಗಪುರಕ್ಕೆ ತೆರಳಿದ್ದರು. ಪತ್ನಿಯ ಆತ್ಮಹತ್ಯೆಯ ವಿಚಾರದಲ್ಲಿ ಆಕೆಯ ಪ್ರಶಂಸೆ ಮತ್ತು ಆಕ್ರೋಶ ಮತ್ತು ಅವರಿಂದ ಅವಮಾನ ತಡೆಯಲಾಗದೆ ತಾಯಿ- ಮಗ ಇಬ್ಬರೂ ಈ ನಿರ್ಧಾರ ತೆಗೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ ‘ಫಸ್ಟ್ ನೈಟ್ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ’

ಗಾನವಿಯ ವಿವಾಹಪೂರ್ವ ಸಂಬಂಧದ ವಿಚಾರದಿಂದ ದಾಂಪತ್ಯದಲ್ಲಿ ಬಿರುಕು

ಸೂರಜ್ ಮತ್ತು ಗಾನವಿ ಹನಿಮೂನ್‌ಗೆ ಶ್ರೀಲಂಕಾಗೆ ತೆರಳಿದ್ದರು. ಆದರೆ ಅಲ್ಲಿ ದಂಪತಿಗಳ ನಡುವೆ ಕಲಹಗಳು ಏರ್ಪಟ್ಟಿತ್ತು. ಜೊತೆಗೆ ಗಾನವಿಯ ವಿವಾಹಪೂರ್ವ ಸಂಬಂಧದ ವಿಚಾರದಿಂದ ದಾಂಪತ್ಯದಲ್ಲಿ ಕಲಹ ಉಂಟಾಗಿತ್ತು ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಎಲ್ಲಾ ಕಾರಣದಿಂದ ಹನಿಮೂನ್ ಮಧ್ಯದಲ್ಲೇ ಮೊಟಕುಗೊಳಿಸಿ ಗಾನವಿ ಬೆಂಗಳೂರಿಗೆ ವಾಪಸ್ ಆಗಿದ್ದರು. ಶ್ರೀಲಂಕಾದಿಂದ ವಾಪಸ್ ಆದ ಬಳಿಕ ಗಾನವಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿದ್ದರು. ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 9:09 am, ಶನಿ, 27 ಡಿಸೆಂಬರ್ 25



Source link

Leave a Reply

Your email address will not be published. Required fields are marked *