ಚಾಮರಾಜನಗರ, (ಫೆಬ್ರವರಿ 01): ಕೊಳ್ಳೇಗಾಲದಲ್ಲಿ (ಕೊಳ್ಳೇಗಾಲ) ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ರವೀಶ್‌ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ ದರ್ಶನ್, ಪೊಲೀಸರು ಅಪ್ರಾಪ್ತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಅಸಲಿಯತ್ತು ಬಯಲಾಗಿದೆ. ಮದುವೆ ನಿಲ್ಲಿಸಲು ಪ್ರಿಯಕರನ ಜೊತೆ ಸೇರಿ ನಯನಾ (ರವೀಶ್‌ನ ಮದ್ವೆಯಾಗಬೇಕಿದ್ದ ಯುವತಿ) ಈ ರೀತಿ ಪ್ಲ್ಯಾನ್ ಮಾಡಿದ್ದಾಳೆ ಎಂದು ಕೊಳ್ಳೇಗಾಲ ಪೊಲೀಸ್ ತನಿಖೆಯಲ್ಲಿ ಬಟಾಬಯಲಾಗಿದೆ.
ತಮಟೆ ಹೊಡೆಯುವ ಕೆಲಸ ಮಾಡ್ತಿದ್ದ ದರ್ಶನ್ ಎಂಬಾತನನ್ನು ನಯನಾ ಲವ್ ಮಾಡುತ್ತಿದ್ದಳು. ಆದರೆ, ದರ್ಶನ್ ಕೆಲಸದ ಬಗ್ಗೆ ಮನೆಯಲ್ಲಿ ಹೇಳಲು ಹೆದರಿದ್ದಳು. ಹೀಗಾಗಿ ಈ ಮದುವೆ ನೀನೇ ನಿಲ್ಲಿಸು ಎಂದು ನಯನಾ, ಪ್ರಿಯಕರ ದರ್ಶನ್ ಗೆ ಹೇಳಿದ್ದಳು. ಅದರಂತೆ ಪ್ರಿಯಕರ ದರ್ಶನ್ ಗ್ಯಾಂಗ್, ಜನವರಿ 27ರಂದು ರವೀಶ್ ಕೊಳ್ಳೇಗಾಲದ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ಕಾರು ಅಡ್ಡಗಟ್ಟಿದ್ದು, ನೀನು ಮದ್ವೆ ಮನೆಗೆ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್ ನಿಂದ ಹಲ್ಲೆ ಪರಾರಿಯಾಗಿತ್ತು. ಬಳಿಕ ರವೀಶ್ ದಾಖಲಾಗಿದ್ದ ನಯನಾ ಬಂದು ತನ್ನ ಮದುವೆಯಾಗಿ ನಾಟಕವಾಡಿದ್ದಳು. ಆಗಲೇ ರವೀಶ್‌ಗೂ ಸಹ ಅನುಮಾನ ಬಂದಿದ್ದರಿಂದ ನಯನಾಳನ್ನು ಮದುವೆಯಾಗಲು ನಿರಾಕರಿಸಿದ್ದ. ಇದೀಗ ನಯನಾಳ ಅಸಲಿ ನೌಟಂಕಿ ಆಟ ಬಯಲಾಗಿದೆ.