
ಛಾಯಾಗ್ರಾಹಕ ಕೆ.ಕೃಷ್ಣಕುಮಾರ್, ಕಲಾ ನಿರ್ದೇಶಕ ಹೊಸ್ಮನೆ ಮೂರ್ತಿ, ಗೀತರಚನೆಕಾರರಾದ ಡಾ||ವಿ.ನಾಗೇಂದ್ರ ಪ್ರಸಾದ್, ಪುನೀತ್ ರಂಗಸ್ವಾಮಿ, ಸಾಹಸ ನಿರ್ದೇಶಕ ಅರ್ಜುನ್ ಮಾಸ್ಟರ್, ನಟಿ ಯಮುನಾ ಶ್ರೀನಿಧಿ ಮುಂತಾದವರು “ರಾಮರಸ” ಚಿತ್ರದ ಕುರಿತು ಮಾತನಾಡಿದರು. ಕಾರ್ಯಕ್ರಮದ ಆರಂಭದಲ್ಲಿ “ಜಂಟಲ್ ಮ್ಯಾನ್” ಚಿತ್ರಕ್ಕಾಗಿ ರಾಜ್ಯ ಪ್ರಶಸ್ತಿ ಪಡೆದಿರುವ ಪ್ರಜ್ವಲ್ ದೇವರಾಜ್ ಅವರನ್ನು ಸನ್ಮಾನಿಸಲಾಯಿತು. ಆ ಚಿತ್ರದ ನಿರ್ದೇಶಕ ಜಡೇಶ್ ಹಂಪಿ ಸೇರಿದಂತೆ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು.