‘ಬಿಗ್ ಬಾಸ್ ಕನ್ನಡ ಸೀಸನ್ 12’ (ಬಿಗ್ ಬಾಸ್ ಕನ್ನಡ ಸೀಸನ್ 12) ಶೋನಿಂದ ಚಂದ್ರಪ್ರಭ ಅವರು ಎಲಿಮಿನೇಟ್ ಆಗಿದ್ದಾರೆ. ದೊಡ್ಮನೆಯಿಂದ ಹೊರಬಂದ ಬಳಿಕ ಟಿವಿ9 ಜೊತೆ ಅವರು ಮಾತನಾಡಿದ್ದಾರೆ. ಬಿಗ್ ಬಾಸ್ ಮನೆಯ ಹಲವು ಸದಸ್ಯರ ಬಗ್ಗೆ ತಮ್ಮ ಅಭಿಪ್ರಾಯವನ್ನು ಅವರು ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ರಕ್ಷಿತಾ ಶೆಟ್ಟಿ (ರಕ್ಷಿತಾ ಶೆಟ್ಟಿ) ಅವರ ಭಾಷೆಯ ಬಗ್ಗೆ ಚರ್ಚೆ ನಡೆದಿತ್ತು. ರಕ್ಷಿತಾ ಶೆಟ್ಟಿ ಅವರು ಕನ್ನಡ ಬರಲ್ಲ ಅಂತ ಹೇಳಿದ್ದರ ಬಗ್ಗೆ ಧ್ರುವಂತ್ ಅನುಮಾನ ವ್ಯಕ್ತಪಡಿಸಿದ್ದರು. ಆ ಕುರಿತು ಚಂದ್ರಪ್ರಭ ಅವರ ಕೂಡ ಅಭಿಪ್ರಾಯ. ‘ರಕ್ಷಿತಾ ಶೆಟ್ಟಿ ಅವರು ಮುಂಬೈನಲ್ಲಿ ಹುಟ್ಟಿ ಬೆಳೆದ ಕಾರಣ ಅವರ ಕನ್ನಡ ಆ ರೀತಿ ಇದೆ’ ಎಂದು ಚಂದ್ರಪ್ರಭ (ಚಂದ್ರಪ್ರಭ) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.