ಪಾಟ್ನಾ, ಮಾರ್ಚ್ 05: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. 2005ರಿಂದ ಮುಖ್ಯಮಂತ್ರಿಯಾಗಿರುವ ಅವರು, ರಚನೆಯಾಗಲಿರುವ ಹೊಸ ಸರ್ಕಾರಕ್ಕೆ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನವಿದೆ ಎಂದು ಹೇಳಿದ್ದಾರೆ. ನವೆಂಬರ್ 20 ರಂದು ಪಾಟ್ನಾದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಕುಮಾರ್ ಪ್ರಮಾಣವಚನ ಸ್ವೀಕರಿಸಿದ ಕೇವಲ ನಾಲ್ಕು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ. ತಮ್ಮ ಸಂಸದೀಯ ಪ್ರಯಾಣದ ಆರಂಭದಿಂದಲೂ ಬಿಹಾರ ವಿಧಾನಸಭೆಯ ಎರಡೂ ಸದನಗಳು ಹಾಗೂ ಸಂಸತ್ತಿನ ಎರಡೂ ಸದನಗಳ ಸದಸ್ಯರು ಬಯಸಿದ್ದೆ ಎಂದು ಕುಮಾರ್ ಹೇಳಿದ್ದಾರೆ.
ಬಿಹಾರ ಸೇರಿದಂತೆ 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ ಫಲಿತಾಂಶ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಎಸ್ ಅಧ್ಯಕ್ಷ ನಿತೀಶ್ ಕುಮಾರ್ ಇಂದು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ರಾಷ್ಟ್ರೀಯ ಬಿಜೆಪಿ ನಿತಿನ್ ನಬಿನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆಗಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ