Headlines

ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಜೆಡಿಎಸ್​​ಗೆ 1 ಸೀಟು!

ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಜೆಡಿಎಸ್​​ಗೆ 1 ಸೀಟು!


ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಜೆಡಿಎಸ್ ಗೆ 1 ಸೀಟು!

ಬೆಂಗಳೂರು, (ಮಾರ್ಚ್ 10): ಕರ್ನಾಟಕ ವಿಧಾನಪರಿಷತ್ (ಕರ್ನಾಟಕ ವಿಧಾನ ಪರಿಷತ್ತು) ನಾಲ್ಕು ಕ್ಷೇತ್ರಗಳ ಮೂರು ಕ್ಷೇತ್ರಗಳಿಗೆ ಬಿಜೆಪಿ (ಬಿಜೆಪಿ) ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಒಟ್ಟು ನಾಲ್ಕು ಸೀಟುಗಳ ಮೇಲಿಂದ ಒಂದು ಸ್ಥಾನವನ್ನು ಮಿತ್ರ ಪಕ್ಷ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ ಮೂರು ಈಶಾನ್ಯ ಶಿಕ್ಷಕರ ಕ್ಷೇತ್ರ, ಪೂರ್ವ ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಇನ್ನುಳಿದ 1 ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಇದರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಹಾಗೂ ಬಿಜೆಪಿ ವಿಧಾನ ಪರಿಷತ್ ಚುನಾವಣೆಗೂ ತಮ್ಮ ಮೈತ್ರಿ ಮುಂದುವರೆದಿದೆ.

ಯಾರು ಯಾವ ಕ್ಷೇತ್ರಕ್ಕೆ?

ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಸುಶೀಲ್ ನಮೋಶಿ, ಪೂರ್ವ ಪದವೀಧರ ಕ್ಷೇತ್ರಕ್ಕೆ ಎಸ್.ವಿ ಸಂಕನೂರ್ ಹಾಗೂ
ಆಗ್ನೇಯ ಪದವೀಧರ ಕ್ಷೇತ್ರದ ಟಿಕೆಟ್ ಕೆ.ಎಂ.ಸುರೇಶ್ ಅವರಿಗೆ ನೀಡಲಾಗಿದೆ. ಇನ್ನುಳಿದ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು, ಜೆಡಿಎಸ್ ಯಾರನ್ನು ಕಣಕ್ಕಿಳಿಸಲಿದೆ ಎನ್ನುವುದೇ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಎಲೆಕ್ಷನ್ ಗೆ 2 ವರ್ಷ ಮೊದಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಬಿಎಸ್ ವೈ ವಿರುದ್ಧ ಭುಗಿಲೆದ್ದ ಆಕ್ರೋಶ

ಜೆಡಿಎಸ್ ಗೆ 1 ಸ್ಥಾನ

ಒಟ್ಟು ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್ ಎರಡಕ್ಕೆ ಬೇಡಿಕೆ ಇಟ್ಟಿತ್ತು. ಬೆಂಗಳೂರು ಶಿಕ್ಷಕರು ಮತ್ತು ಆಗ್ನೇಯ ಪದವೀಧರ ಪದವೀಧರ ಕ್ಷೇತ್ರಗಳನ್ನು ಜೆಡಿಎಸ್ ಕೇಳಿತ್ತು. ಆದರೆ, ಆಗ್ನೇಯ ಪದವೀಧರ ಕ್ಷೇತ್ರವನ್ನು ಬಿಜೆಪಿಯ ಚಿದಾನಂದಗೌಡ ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ಬಿಜೆಪಿ ಬಿಟ್ಟುಕೊಟ್ಟಿಲ್ಲ. ಇನ್ನು ಕಾಂಗ್ರೆಸ್‌ನ ಪುಟ್ಟಣ್ಣ ಇರುವ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳು

ಕಾಂಗ್ರೆಸ್ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಮರು ಸ್ಪರ್ಧೆ ಮಾಡಲಿದ್ದಾರೆ. ಪಶ್ಚಿಮ ಪದವೀಧರರ ಕ್ಷೇತ್ರದಿಂದ ಮೋಹನ್ ಲಿಂಬಿಕೈ, ಆಗ್ನೇಯ ಪದವೀಧರರ ಕ್ಷೇತ್ರದಿಂದ ಶಶಿ ಹುಲಿಕುಂಟೆಮಠ ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದ ಟಿಕೆಟ್ ಶರಣಪ್ಪ ಮಟ್ಟೂರ್ ಅವರಿಗೆ ನೀಡಲಾಗುತ್ತದೆ.

2020 ರಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರ, ಆಗ್ನೇಯ ಪದವೀಧರರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಗಳ ಚುನಾವಣೆಗಳು ನಡೆದವು. ಎರಡು ಪದವೀಧರರ ಕ್ಷೇತ್ರಗಳಿಂದ ಎಸ್ ವಿ ಸಂಕನೂರು ಮತ್ತು ಚಿದಾನಂದ್ ಗೌಡ ಆಯ್ಕೆಯಾದರು. ಎರಡು ಶಿಕ್ಷಕರ ಕ್ಷೇತ್ರಗಳಿಂದ ಶಶಿಲ್ ನಮೋಶಿ ಮತ್ತು ಪುಟ್ಟಣ್ಣ ಆಯ್ಕೆಯಾದರು. ನಾಲ್ವರೂ ಬಿಜೆಪಿಯವರಾಗಿದ್ದರು. ಆದರೆ ಪುಟ್ಟಣ್ಣ ಕೇಸರಿ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿದ್ದರು. ನಂತರ, ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅದೇ ಕ್ಷೇತ್ರದಿಂದ ಮರು ಆಯ್ಕೆಯಾದರು. ಇವರೆಲ್ಲರ ಅವಧಿಗಳು 2026ರ ನವೆಂಬರ್ 11 ರಂದು ಕೊನೆಗೊಳ್ಳುತ್ತವೆ. ಆದರೆ, ಅವಧಿ ಮುಗಿಯುವ ಒಂದು ತಿಂಗಳ ಮೊದಲು ಚುನಾವಣೆಗಳನ್ನು ನಡೆಸಬೇಕು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *