ಕಾಂಗ್ರೆಸ್​​ಗೆ ಭಾರಿ ಮುಖಭಂಗ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯದ್ದೇ ಪಾರುಪತ್ಯ

ಕಾಂಗ್ರೆಸ್​​ಗೆ ಭಾರಿ ಮುಖಭಂಗ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯದ್ದೇ ಪಾರುಪತ್ಯ


ಬೆಂಗಳೂರು, ಡಿಸೆಂಬರ್ 24: ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ಗೆ ಭಾರಿ ಮುಖಭಂಗವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್, ಉತ್ತರ ಕನ್ನಡ ಜಿಲ್ಲೆ ಮಂಕಿ ಪಟ್ಟಣ ಪಂಚಾಯತ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್‌ಗಳಲ್ಲಿ ಬಿಜೆಪಿ ಬಹುಮತ ಪಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಭೆ ಮತ್ತು ರಾಯಚೂರು ಜಿಲ್ಲೆಯ ತುರವಿಹಾಳ ಪಟ್ಟಣ ಪಂಚಾಯತ್‌ಗಳ ತಲಾ 1 ಉಪಚುನಾವಣೆಯಲ್ಲಿ ನಡೆದ ಉಪಚುನಾವಣೆಯಲ್ಲಿಯೂ ಬಿಜೆಪಿಗೆ ನಗೆ ಬೀರಿದೆ.

ದಕ್ಷಿಣ ಕನ್ನಡದಲ್ಲಿ ಬಿಜೆಪಿ ಪ್ರಾಬಲ್ಯ

ಬಜಪೆ ಪಟ್ಟಣ ಪಂಚಾಯತ್‌ನ ಒಟ್ಟು 19 ಸ್ಥಾನಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು ಗೆದ್ದಿದ್ದು, ಕಾಂಗ್ರೆಸ್ ನಾಲ್ಕು ಸ್ಥಾನಗಳನ್ನು ಪಡೆದಿದೆ. SDPI ಮೂರು ಸ್ಥಾನ ಪಡೆದಿದ್ದರೆ, ಉಳಿದ ಒಂದು ಸ್ಥಾನ ಸ್ವತಂತ್ರ ಅಭ್ಯರ್ಥಿ ಪಾಲಾಗಿದೆ. ಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ 10 ಮತ್ತು ಕಾಂಗ್ರೆಸ್ 8 ಸ್ಥಾನಗಳನ್ನು ಪಡೆದಿವೆ. ಒಟ್ಟು 42 ಅಭ್ಯರ್ಥಿಗಳು ಚುನಾವಣೆಗೆ ಇದ್ದರು.

ಇದನ್ನೂ ಓದಿ: ಅಪೆಕ್ಸ್ ಬ್ಯಾಂಕ್ ಜಟಾಪಟಿ; ಡಿಕೆಶಿಗೆ ಚೆಕ್ ಮೇಟ್ ಕೊಟ್ಟ ಸಿದ್ದರಾಮಯ್ಯ!

ಮೊದಲ ಚುನಾಣೆಯಲ್ಲೇ ಗೆದ್ದ ಬಿಜೆಪಿ

ಮಂಕಿ ಪಟ್ಟಣ ಪಂಚಾಯತ್ ಆದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ನಡೆದಿದೆ. ಆದರೆ ಫಲಿತಾಂಶದ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗಾಗಿ ಮಾಡಿದೆ. 12 ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರ ಹಿಡಿದಿದ್ದರೆ, 8 ಸ್ಥಾನಗಳನ್ನು ಗೆಲ್ಲುವಲ್ಲಿ ಮಾತ್ರ ಕಾಂಗ್ರೆಸ್ ಯಶಸ್ವಿಯಾಗಿದೆ.

ಬಾಶೆಟ್ಟಿಹಳ್ಳಿಯಲ್ಲಿ ಕೇಸರಿ ಪಡೆ ಕಮಾಲ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲೂ ಕಮಲ ಪಡೆ ಗೆದ್ದು ಬೀಗಿದೆ. 19 ಸ್ಥಾನಗಳಲ್ಲಿ 14 ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. 11 ವರ್ಷಗಳ ಬಳಿಕ ನಡೆದ ಚುನವಣೆಯಲ್ಲಿ ಕೇಸರಿ ಪಡೆ ಕಮಾಲ್ ಮಾಡಿದೆ.

ಬಿ.ಎಲ್. ಸಂತೋಷ ಸಂತಸ

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಾಮಾಜಿಕ ’ಜಲತಾಣದಲ್ಲಿ ಪೋಸ್ಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ, ಮತಪತ್ರದ ಮೂಲಕ ನಡೆದ ಚುನಾವಣೆಯಲ್ಲಿ ಬಿಜೆಪಿ ವಿಜಯ ಸಾಧಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 6:41 pm, ಬುಧವಾರ, 24 ಡಿಸೆಂಬರ್ 25





Source link

Leave a Reply

Your email address will not be published. Required fields are marked *