ಗದಗ, ಫೆ.21: ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ (ಚಂದ್ರು ಲಮಾಣಿ) ಅವರು 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಅವರ ಬಾಲಾಜಿ ಆಸ್ಪತ್ರೆಯಲ್ಲಿ ಈ ದಾಳಿ ನಡೆದಿದೆ. ಶಾಸಕ ಲಮಾಣಿ ಅವರೊಂದಿಗೆ ಅವರ ಸರ್ಕಾರಿ ಪಿಎ ವಾಲ್ಮೀಕಿ ಮತ್ತು ಖಾಸಗಿ ಪಿಎ ಮಂಜುನಾಥ್ ಹಾಗೂ ಗುರು ಲಮಾಣಿ ಎಂಬ ಇಬ್ಬರು ಸಹಾಯಕರು ಸಹ ಲೋಕಾಯುಕ್ತರ ವಶದಲ್ಲಿದ್ದಾರೆ. ಒಟ್ಟು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಗುತ್ತಿಗೆದಾರರೊಬ್ಬರಿಂದ 5 ಲಕ್ಷ ರೂ. ಕಮಿಷನ್ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಏಕಾಏಕಿ ದಾಳಿ ನಡೆಸಿದರು. ರಸ್ತೆ ಪಕ್ಕದಲ್ಲಿ ಒಂದು ಕೋಟಿ ರೂಪಾಯಿ ಮೊತ್ತದ ವಾಲ್ ನಿರ್ಮಾಣಕ್ಕೆ ಶಾಸಕರು 12 ಪರ್ಸೆಂಟ್ ಕಮಿಷನ್ ಕೇಳಿದ್ದರು. ನಂತರ 11 ಪರ್ಸೆಂಟ್‌ಗೆ ವ್ಯವಹಾರ ಕುದುರಿತ್ತು. ಈ ಹಣವನ್ನು ಅವರ ಪಿಎ ಮೂಲಕ ಸ್ವೀಕರಿಸಲು ಸೂಚಿಸಿದಾಗ, ಲೋಕಾಯುಕ್ತರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಇದೀಗ ಅವರನ್ನು ವಶಪಡಿಸಿಕೊಂಡು ವಿಚಾರಣೆಗೆ ಹೋಗುವ ದೃಶ್ಯ ಇಲ್ಲಿದೆ ನೋಡಿ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.