ಬಳ್ಳಾರಿ, ಜನವರಿ 16: ಬಳ್ಳಾರಿ ಬ್ಯಾನರ್ ಗಲಾಟೆ (ಬಳ್ಳಾರಿ ಗಲಭೆ) ಬಿಜೆಪಿಗೆ ದೊಡ್ಡ ಅಸ್ತ್ರವಾಗಿದೆ. ಸರ್ಕಾರದ ವಿರುದ್ಧ ಸಮರಕ್ಕೆ ರೆಡ್ಡಿ ಮತ್ತು ಶ್ರೀರಾಮುಲು ಸಜ್ಜಾಗಿದ್ದಾರೆ. ಹೀಗಾಗಿ ನಾಳೆ ಬಿಜೆಪಿಯಿಂದ ಬೃಹತ್ ಕಾರ್ಯಕ್ರಮ ರ್ಯಾಲಿ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಈ ಬೆನ್ನಲ್ಲೇ ಇದೀಗ ಮದ್ಯ ಮಾರಾಟ ನಿಷೇಧ (ಮದ್ಯ ನಿಷೇಧ) ಮಾಡಿ ಬಳ್ಳಾರಿ ಡಿಸಿ ನಾಗೇಂದ್ರ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಬಳ್ಳಾರಿ ಗಲಭೆ ಖಂಡಿಸಿ ಬಳ್ಳಾರಿಯಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆ ಹಿನ್ನೆಲೆ ಇಂದು ರಾತ್ರಿ 10 ಗಂಟೆಯಿಂದ ನಾಡಿದ್ದು ಅಂದರೆ ಜನವರಿ 18ರ ಬೆಳಗ್ಗೆ 6 ಗಂಟೆಯವರೆಗೆ ನಾಳೆ ಮಹಾನಗರ ಪಾಲಿಕೆ ಮದ್ಯ ಮಾರಾಟ ನಿರ್ಬಂಧಿಸಿ ಬಳ್ಳಾರಿ ಡಿಸಿ ನಾಗೇಂದ್ರ ಪ್ರಸಾದ್ ಹಿನ್ನೆಲೆ ಆದೇಶ ಹೊರಡಿಸಿದ್ದಾರೆ.
ಆದೇಶದಲ್ಲೇನಿದೆ?
ಜನವರಿ 1 ರಂದು ವಾಲ್ಮೀಕಿ ಮಹರ್ಷಿಗಳವರ ಪುತ್ಥಳಿ ಅನಾವರಣ ಕಾರ್ಯಕ್ರಮದ ನಿಮಿತ್ತ ಹಾಕಿದ್ದ ಬ್ಯಾನರ್ ವಿಷಯದ ಕುರಿತು ಗುಂಪು ಘರ್ಷಣೆ ನಡೆಯಿತು, ಈ ಸಂಬಂಧ ಜನವರಿ 17 ರಂದು ಬೆಳಿಗ್ಗೆ 10:30 ಕ್ಕೆ ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ಪಕ್ಷದ ವಿರೋಧ ಪಕ್ಷದ ನಾಯಕ ಆರ್.
ಇದನ್ನೂ ಓದಿ: ಬಳ್ಳಾರಿ ಗಲಭೆ: ನಾಳೆ ನಡೆಯಲಿರುವ ಬಿಜೆಪಿ ಬೃಹತ್ ಪ್ರತಿಭಟನೆ ರ್ಯಾಲಿ ಬಗ್ಗೆ ಎಸ್ಪಿ ಹೇಳಿದ್ದಾರೆ
ಈ ಹಿನ್ನೆಲೆ ಬಳ್ಳಾರಿ ನಗರದಾದ್ಯಂತ ಪ್ರತಿಭಟನಾ ಸಭೆಯು ಶಾಂತ ರೀತಿಯಲ್ಲಿ ನಡೆಯುವ ಸಲುವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡಿದೆ, ಈ ಬಂದೋಬಸ್ತ್ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜನವರಿ 17 ರಂದು ಬೆಳಿಗ್ಗೆ 06 ಗಂಟೆಯಿಂದ ಜನವರಿ 18 ರ ಬೆಳಿಗ್ಗೆ 06 ಗಂಟೆಯವರೆಗೆ ಮದ್ಯದಂಗಡಿ, ಬಾರ್, ಹೋಟೆಲ್ ಮತ್ತು ಇತರ ಸ್ಥಳಗಳಲ್ಲಿ ಮದ್ಯದಂಗಡಿ ಮತ್ತು ಇತರ ಸ್ಥಳಗಳಲ್ಲಿ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.