ಬೆಂಗಳೂರು: ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್

ಬೆಂಗಳೂರು: ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್


ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಬೆಂಗಳೂರು, ನವೆಂಬರ್ 18: ಬೆಂಗಳೂರಿನ ಮೆಟ್ರೋ ನಿಲ್ದಾಣವನ್ನು (ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ) ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಒಂದು ಬಿಎಂಆರ್‌ಸಿಎಲ್‌ನಲ್ಲಿ ಆತಂಕ ಸೃಷ್ಟಿಸಿದೆ. ನವೆಂಬರ್ 14ರ ರಾತ್ರಿ 11.30ಕ್ಕೆ ಬಿಎಂಆರ್‌ಸಿಎಲ್ (BMRCL) ಅಧಿಕೃತ ಇಮೇಲ್‌ಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆಯ ಸಂದೇಶ ಕಳುಹಿಸಿದ್ದ. ವ್ಯಕ್ತಿ ತಾನು ಕಳಿಸಿದ ಇ-ಮೇಲ್ ನಲ್ಲಿ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡುತ್ತೇನೆಂದು ಬರೆದಿದ್ದಾನೆ.

ಇಮೇಲ್‌ನಲ್ಲಿ, ಮೆಟ್ರೋ ಸಿಬ್ಬಂದಿಯಾದ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ನಿಮ್ಮ ಒಂದು ಮೆಟ್ರೋ ನಿಲ್ದಾಣ ಬ್ಲಾಸ್ಟ್ ಸಂಭವಿಸಿದೆ. ನಾನು ಉಗ್ರಗಾಮಿಯಂತೆ, ಯಾರ ವಿರುದ್ಧವೂ ಬೆದರಿಕೆ ಹಾಕಲಾಗಿದೆ. ಮೇಲ್ ಪರಿಶೀಲಿಸಿದ ಬಳಿಕ ಬಿಎಂಆರ್‌ಸಿಎಲ್ ಅಧಿಕಾರಿ ತಕ್ಷಣವೇ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ದೂರು ಹಿನ್ನೆಲೆಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

(ಮಾಹಿತಿ ಅಪ್‌ಡೇಟ್ ಆಗುತ್ತದೆ)

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *