
ಚಾಲಕನಿಗೆ ಹಲ್ಲೆಯಾದ ತಕ್ಷಣ ಬಸ್‌ನಲ್ಲಿದ್ದ ಮಹಿಳಾ ಪ್ರಯಾಣಿಕರು ನೆರವಿಗೆ ಧಾವಿಸಿದರು. ಸುರಿಯುತ್ತಿದ್ದ ರಕ್ತವನ್ನು ಒರೆಸಿ, ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದರು. ಸಾರ್ವಜನಿಕ ಸ್ಥಳದಲ್ಲಿ ಇಂತಹ ದುರ್ಘಟನೆ ನಡೆದರೂ, ಆ ಯುವಕನ ವರ್ತನೆ ಮಾತ್ರ ಬದಲಾಗಲಿಲ್ಲ.
ಹಲ್ಲೆ ನಡೆಸಿದ ನಂತರವೂ ಆ ಯುವಕ ರೌಡಿಸಂ ಪ್ರದರ್ಶಿಸಿದ್ದಾನೆ. ಹೊಡೆದಿದ್ದು ನಾನೇ, ಏನು ಮಾಡಿಕೊಳ್ಳುತ್ತೀರಾ? ಎಂದು ಅಲ್ಲಿ ನೆರೆದಿದ್ದ ಸಾರ್ವಜನಿಕರಿಗೆ ಅವಾಜ್ ಹಾಕಿ ಮತ್ತಷ್ಟು ಆಕ್ರೋಶಕ್ಕೆ ಕಾರಣನಾಗಿದ್ದಾನೆ.