ನೆಲಮಂಗಲ, ಜನವರಿ 16: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ಹಿಂದಿನಿಂದ ಬೊಲೆರೋ ಪಿಕ್-ಆಪ್ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಪವಾಡ ಎಂಬಂತೆ ಬೊಲೆರೊ ಪಿಕ್-ಆಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದರೆ, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯ ಕಾಮಗಾರಿಯ ಹಿನ್ನೆಲೆ ಒಂದೇ ಸಂಚಾರದಲ್ಲಿ ವಾಹನಗಳು ಸಂಚಾರ ನಡೆಸುತ್ತಿದ್ದ ಘಟನೆ ಎರಡು ದಿನದ ಹಿಂದೆ ತಡವಾಗಿ ಬೆಳಕಿಗೆ ಬಂದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.