Headlines

Dharmendra Hospitalized: ಹಿರಿಯ ನಟ ಧರ್ಮೇಂದ್ರ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

Dharmendra Hospitalized: ಹಿರಿಯ ನಟ ಧರ್ಮೇಂದ್ರ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು


ಬಾಲಿವುಡ್ ನ ಖ್ಯಾತ ನಟ ಧರ್ಮೇಂದ್ರ (ಧರ್ಮೇಂದ್ರ) ಅವರ ಆರೋಗ್ಯದಲ್ಲಿ ಏಳುಪೇರು ಉಂಟಾಗಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ವೆಂಟಿಲೇಟರ್ ಮೂಲಕ ಅವರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆ ಕಡೆಯಿಂದ ಹೆಲ್ತ್ ಅಪ್ಡೇಟ್ ಬಿಡುಗಡೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಧರ್ಮೇಂದ್ರ ಅವರಿಗೆ ಈಗ 89 ವರ್ಷ ವಯಸ್ಸು. ಆ ಕಾರಣದಿಂದ ಅಭಿಮಾನಿಗಳಿಗೆ ಆತಂಕ ಉಂಟಾಗುತ್ತದೆ. ಆಪ್ತರು ಮತ್ತು ಕುಟುಂಬದವರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಧರ್ಮೇಂದ್ರ ಪತ್ನಿ ಹೇಮಾ ಮಾಲಿನಿ (ಹೇಮಾ ಮಾಲಿನಿ) ಕೂಡ ಆಸ್ಪತ್ರೆಗೆ ಆಗಮಿಸಿದ್ದಾರೆ.

ಕೆಲವು ದಿನಗಳ ಹಿಂದೆ ಧರ್ಮೇಂದ್ರ ಅವರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ರೆಗ್ಯುಲರ್ ಹೆಲ್ತ್ ಚೆಕ್ ಮಾಡಿಸಿಕೊಂಡು ಅವರು ಮನೆಗೆ ತೆರಳಿದ್ದರು. ಅದಾಗಿ ಕೆಲವೇ ದಿನಗಳು ಕಳೆಯುವುದರೊಳಗೆ ಅವರಿಗೆ ಮತ್ತೆ ಆರೋಗ್ಯ ಕೈ ಕೊಟ್ಟಿದೆ. ಸದ್ಯಕ್ಕೆ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ತೀವ್ರ ನಿಗಾ ಘಟಕದಲ್ಲಿ ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಅನುಕೂಲವಾದ ವೆಂಟಿಲೇಟರ್ ಹಾಕಲಾಗಿದೆ. ಈ ಬಗ್ಗೆ ಕುಟುಂಬದವರು ಇನ್ನೂ ಅಧಿಕೃತವಾಗಿ ಮಾಹಿತಿ ನೀಡಿಲ್ಲ. ಮಕ್ಕಳಾದ ಬಾಬಿ ಡಿಯೋಲ್, ಸನ್ನಿ ಡಿಯೋಲ್ ಅವರ ತಂದೆಯ ಆರೋಗ್ಯದ ಬಗ್ಗೆ ಸದ್ಯದಲ್ಲೇ ಹೇಳಿಕೆ ನೀಡುವ ಸಾಧ್ಯತೆ ಇದೆ.

1960ರಿಂದಲೂ ಧರ್ಮೇಂದ್ರ ಅವರು ಚಿತ್ರರಂಗದಲ್ಲಿ ಆಯಕ್ಟೀವ್ ಆಗಿದ್ದಾರೆ. 6 ವೃತ್ತಿಗಳನ್ನು ಜೀವನದಲ್ಲಿ ಹಲವು ಸೂಪರ್ ಹಿಟ್ ಸಿನಿಮಾ ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಹಿಂದಿ ಚಿತ್ರರಂಗದ ‘ಹೀ-ಮ್ಯಾನ್’ ಆಗಿ ಅವರು ಅಭಿಮಾನಿಗಳನ್ನು ರಂಜಿಸಿದ್ದಾರೆ. 300ಕ್ಕೂ ಅಧಿಕ ಸಿನಿಮಾಗಳಲ್ಲಿ ಧರ್ಮೇಂದ್ರ ಅವರು ನಟಿಸಿದ್ದಾರೆ. ಅನೇಕ ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದೆ.

ಇದನ್ನೂ ಓದಿ: ಈ ನಟಿಯನ್ನು ಅತಿಯಾಗಿ ಪ್ರೀತಿಸಿದ್ದ ಧರ್ಮೇಂದ್ರ; ಬ್ರೇಕಪ್ ಆಗಿದ್ದೇಕೆ?

ವಯೋಸಹಜವಾಗಿ ಅವರಿಗೆ ಒಂದಷ್ಟು ಆರೋಗ್ಯ ಸಮಸ್ಯೆಗಳು ಎದುರಾದವು. ಅದರ ನಡುವೆಯೂ ಅವರು ಸಿನಿಮಾಗಳಲ್ಲಿ ನಟಿಸುವುದನ್ನು ನಿಲ್ಲಿಸಲಿಲ್ಲ. 2024 ರ ಫೆಬ್ರವರಿಯಲ್ಲಿ ಬಂದ ‘ತೇರಿ ಬಾತೋಮೆ ಐಸಾ ಉಲ್ಜಾ ಜಿಯಾ’ ಸಿನಿಮಾದಲ್ಲಿ ಕೂಡ ಧರ್ಮೇಂದ್ರ ಅವರು ನಟಿಸಿದರು. ಅಮಿತಾಭ್ ಬಚ್ಚನ್ ಅವರ ಮೊಮ್ಮೊಗ ಅಗಸ್ತ್ಯ ನಂದ ನಟನೆಯ ಹೊಸ ಸಿನಿಮಾದಲ್ಲಿ ಕೂಡ ಧರ್ಮೇಂದ್ರ ಅವರಿಗೆ ಒಂದು ಪಾತ್ರವಿದೆ. ಆ ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *