
ತನುಷ್ ಶಿವಣ್ಣ ನಟನೆಯ ‘ಬಾಸ್’ ಸಿನಿಮಾಗೆ (ಬಾಸ್ ಚಲನಚಿತ್ರ) ವಿ. ಲವ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ಸಾಮ್ಯತೇ ಎಂಬ ಆರೋಪ ಕೇಳಿಬಂದಿದೆ. ಈ ಚಿತ್ರಕ್ಕೆ ಸೆನ್ಸಾರ್ ನೀಡಬಾರದು ಎಂದು ದರ್ಶನ್ (ದರ್ಶನ್) ಪರ ವಕೀಲರು ನೋಟಿಸ್ ನೀಡಿದ್ದಾರೆ. ಆ ಬಗ್ಗೆ ನಿರ್ದೇಶಕ ಲವ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ನನಗೆ ಯಾವುದೇ ನೋಟಿಸ್ ಬಂದಿಲ್ಲ. 3-4 ಜನರು ನನಗೆ ಬೆದರಿಕೆ ಕರೆ ಮಾಡಿದ್ದಾರೆ. ನಾನು ಅದನ್ನು ಗಮನಕ್ಕೆ ತೆಗೆದುಕೊಂಡಿಲ್ಲ. ದರ್ಶನ್ ಅವರ ರಿಯಲ್ ಸ್ಟೋರಿ ಇಟ್ಟುಕೊಂಡು ನಾವು ಸಿನಿಮಾ ಮಾಡಿಲ್ಲ. ರೇಣುಕಾಸ್ವಾಮಿ ಘಟನೆ ಕೂಡ ಈ ಸಿನಿಮಾದಲ್ಲಿ ಇಲ್ಲ. ಕಾಕತಾಳೀಯವಾಗಿ ಹೋಲಿಕೆ ಆಗಿರಬಹುದು. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಸಿನಿಮಾ ಆಗ ಇಟ್ಟುಕೊಂಡು ನಾವು ಮಾಡೋಕೆ ಆಗಲ್ಲ. ವಕೀಲನಾಗಿ ನನಗೆ ಅದು ಗೊತ್ತು. ನಮಗೆ ನೋಟಿಸ್ ಬಂದರೆ ಅದಕ್ಕೆ ಉತ್ತರ ನೀಡುತ್ತೇವೆ’ ಎಂದು ಲವ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.