
ಸತ್ಯ ಘಟನೆಗಳನ್ನು ಆಧರಿಸಿ ‘ಬಾಸ್’ ಸಿನಿಮಾ (ಬಾಸ್ ಚಲನಚಿತ್ರ) ನಿರ್ಮಾಣ ಆಗಿದೆ. ಈ ಚಿತ್ರಕ್ಕೆ ಲವ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ನಟ ದರ್ಶನ್ (ದರ್ಶನ್) ಅವರ ಜೀವನದ ಘಟನೆಗಳಿಗೆ ಸಾಮ್ಯತೆ ಕಾಣಿಸಿದೆ ಎಂಬ ಆರೋಪವಿದೆ. ಆ ಬಗ್ಗೆ ನಿರ್ದೇಶಕರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ‘ನಮ್ಮ ಸಿನಿಮಾಗೆ ಸೆನ್ಸಾರ್ ಪ್ರಮಾಣ ಪತ್ರ ಸಿಕ್ಕಿದೆ. ಯಾರ ಪ್ರಭಾವಕ್ಕೂ ಒಳಗಾಗದೇ ಕಾನೂನಿನ ಪ್ರಕಾರ ಯು/ಎ ಪ್ರಮಾಣಪತ್ರ ಕೊಡುಗೆ. ನಾನು ಸ್ಪಷ್ಟವಾಗಿ ಹೇಳುತ್ತೇನೆ.. ಇದು ಪ್ರತಿ ದಿನ ಸಮಾಜದಲ್ಲಿ ನಡೆಯುವ ಸತ್ಯ ಘಟನೆಗಳನ್ನು ಆಧರಿಸಿ ಮಾಡಿದ ಸಿನಿಮಾ. ಈ ಚಿತ್ರಕ್ಕೂ ದರ್ಶನ್ ಅವರಿಗೂ ಸಂಬಂಧವಿಲ್ಲ. ಅವರ ಕಥೆಯನ್ನು ಇಟ್ಟುಕೊಂಡು ನಾವು ಸಿನಿಮಾ ಮಾಡಿಲ್ಲ’ ಎಂದು ಲವ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.