
‘ಬಾಸ್’ ಸಿನಿಮಾ ವಿಷಯ ಚರ್ಚೆ ಹುಟ್ಟುಹಾಕಿದೆ. ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಹೀರೋ ಕೊಲೆ ಕೇಸ್ ನಲ್ಲಿ ಸಿಕ್ಕಿ ಬೀಳೋ ಕಥೆ ಇದು. ಇದನ್ನು ನೋಡಿದ ಅನೇಕರಿಗೆ ಇದು ರೇಣುಕಾಸ್ವಾಮಿ ಕೊಲೆ ಪ್ರಕರಣವೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಉತ್ತರಿಸಿರೋ ನಿರ್ದೇಶಕರು ‘ಇದು ರೇಣುಕಾಸ್ವಾಮಿ ಅಲ್ಲ, ಶಿವಸ್ವಾಮಿ ಕೊಲೆ ಕೇಸ್’ ಎಂದು ಹೇಳಿದ್ದಾರೆ. ಟ್ರೇಲರ್ ರಿಲೀಸ್ ಆದ ಬಳಿಕ ಎಲ್ಲ ವಿಷಯ ಗೊತ್ತಾಗಲಿದೆ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.