ಬೆಂಗಳೂರು, ನವೆಂಬರ್ 24: ಅಕ್ರಮವಾಗಿ ಬಿಪಿಎಲ್ ಕಾರ್ಡ್ಪಡೆದವರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ, ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸೇಶನ್ ಮಾಹಿತಿಯ ಆಧಾರದ ಮೇಲೆ ರಾಜಧಾನಿ ಬೆಂಗಳೂರಲ್ಲಿ ಲಕ್ಷಾಂತರ ಕಾರ್ಡ್‌ಗಳು ರದ್ದಾಗುವ ಸಾಧ್ಯತೆಯಿದೆ. ಆಹಾರ ಇಲಾಖೆಗೆ ಕಳೆದ ತಿಂಗಳು ದೊರೆತಿರುವ ಟ್ಯಾಕ್ಸ್ ರಿಪೋರ್ಟ್ ಆಧಾರದಲ್ಲಿ, ತೆರಿಗೆ ಕಟ್ಟುತ್ತಿದ್ದರೂ ಪಡೆದಿರುವ ಬಿಪಿಎಲ್ ಕಾರ್ಡ್‌ಗಳು ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತನೆಯಾಗಲಿವೆ.
ಆಹಾರ ಇಲಾಖೆ ರಾಜಾಜಿನಗರ ಜಂಟಿ ಆಯುಕ್ತರ ರಚನೆಯೇ 13,329 ಬಿಪಿಎಲ್ ಕಾರ್ಡ್‌ಗಳು ರದ್ದಾಗಿದ್ದು, ಅದನ್ನು ಎಪಿಎಲ್ ಆಗಿ ಪರಿವರ್ತಿಸಲಾಗಿದೆ. ಈ ಹಿನ್ನಲೆ ರಾಜಾಜಿನಗರದ ಆಹಾರ ಇಲಾಖೆ ಮುಂದೆ ಜನರು ಜಮಾಯಿಸಿದ್ದಾರೆ. ಕಳೆದ ತಿಂಗಳು ರೇಷನ್ ಸಿಕ್ಕಿತ್ತು, ಆದರೆ ಈ ತಿಂಗಳು ನಮಗೆ ರೇಷನ್ ನೀಡಿಲ್ಲ ಎಂದು. ಈ ಬಗ್ಗೆ ಮಾತನಾಡಿರೋ ಮಹಿಳೆಯೋರ್ವರು, ನಾವು ಟ್ಯಾಕ್ಸ್ ಕಟ್ಟುತ್ತಿಲ್ಲ, ಮಗಳು ಕೆಲಸ ಮಾಡುತ್ತಿದ್ದಾರೆ. ಆದರೆ ಈಗ ಮದುವೆ ಮಾಡಿ ಕೊಟ್ಟಿದ್ದೇವೆ. ಹೀಗಿದ್ದರೂ ನಮಗೆ ರೇಷನ್ ನೀಡುತ್ತಿಲ್ಲ ಎಂದು ಅಲವತ್ತುಕೊಂಡಿದ್ದಾರೆ.
ಇದನ್ನೂ ಓದಿ: ಅನರ್ಹ ಬಿಪಿಎಲ್ ಕಾರ್ಡ್ ಕಂಡುಹಿಡಿಯೋದು ಹೇಗೆ, ವಿಧಾನ ಏನು?
BPL ಕಾರ್ಡ್‌ಗೆ ಇರುವ ಸ್ಥಳವೇನು?
2017ರಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಈ ಪ್ರಕಾರ, ಬಿಪಿಎಲ್ ಕಾರ್ಡ್ ಪಡೆಯಲು ಹಲವು ನಿಬಂಧನೆಗಳನ್ನು ಹೇರಲಾಗಿದೆ. ಸರ್ಕಾರಿ ನೌಕರಿಯಲ್ಲಿರಬಾರದು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಭೂಮಿ, ನಗರ ಪ್ರದೇಶದಲ್ಲಿ 1 ಸಾವಿರ ಚದರ ಅಡಿ ಹೆಚ್ಚಿನ ಭೂಮಿ ಹೊಂದಿರಬಾರದು, ನಾಲ್ಕು ಚಕ್ರದ ವಾಹನ ಇರಬಾರದು, ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿ ಮೀರಬಾರದು ಎಂದು ತಿಳಿಸಲಾಗಿದೆ.
ಅಕ್ರಮವಾಗಿ ಪಡೆದಿರುವ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲು ಮುಂದಾಗಿರೋ ರಾಜ್ಯ ಸರ್ಕಾರ ಪಡಿತರ ಅಂಗಡಿಗಳ ಮುಂದೆ ಈ ಬಗ್ಗೆ ನೋಟಿಸ್ ಹಾಕಿ, ದಾಖಲೆಗಳನ್ನು ನೀಡಲು ಸೂಚನೆ ನೀಡಲಾಗಿದೆ. ಇದರಿಂದ ಬಡಕುಟುಂಬಗಳು ಕಂಗಾಗುತ್ತಿರುವುದು ಸರ್ಕಾರ, ಮರುಪರಿಶೀಲನೆ ಮಾಡಬೇಕು ಎಂದು ಹೇಳಿದ್ದಾರೆ. ಈ ಹಿಂದೆ ಹಾವೇರಿ ಜಿಲ್ಲೆಯಲ್ಲಿಯೇ 14 ಸಾವಿರಕ್ಕೂ ಅಧಿಕ ಕಾರ್ಡ್ ರದ್ದುಗೊಳಿಸಲು ಆದೇಶ ಮಾಡಿರೋದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್‌ಗಳು ಈ ಮೇಲಕ್ಕೆ 14,771 ಅನರ್ಹ ಪಡಿತರ ಚೀಟಿಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 3:48 pm, ಸೋಮ, 24 ನವೆಂಬರ್ 25