Headlines

ಉಡುಪಿಯಲ್ಲಿ ನೇಣಿಗೆ ಕೊರಳೊಡ್ಡಿದ ಅಣ್ಣ-ತಂಗಿ: ಕಾರಣ ನಿಗೂಢ

ಉಡುಪಿಯಲ್ಲಿ ನೇಣಿಗೆ ಕೊರಳೊಡ್ಡಿದ ಅಣ್ಣ-ತಂಗಿ: ಕಾರಣ ನಿಗೂಢ


ಉಡುಪಿ, ಅಕ್ಟೋಬರ್ 17: ನೇಣುಬಿಗಿದುಕೊಂಡು ಅಣ್ಣ-ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ (ಉಡುಪಿ) ಲೇಬರ್ ಕಾಲೋನಿಯ ಜೋಪಡಿಯಲ್ಲಿ ನಡೆದಿದೆ. ಮಲ್ಲೇಶ್(23) ಮತ್ತು ಪವಿತ್ರಾ(17) ಮೃತರಾಗಿದ್ದರೆ, ಪವಿತ್ರಾ ತಾಯಿ ಮನೆಯಲ್ಲಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಕೊರಳೊಡ್ಡಿದ್ದಾರೆ. ಆತ್ಮಹತ್ಯೆಗೆ ಕಾರಣ ನಿಗೂಢವಾಗಿದ್ದು ಅಕ್ಕ ಮತ್ತು ತಂಗಿಯರ ಮಕ್ಕಳಾಗಿರೋ ಇವರಿಬ್ಬರು ಯಾಕೆ ಇಂತಹ ನಿರ್ಧಾರ ತೆಗೆದುಕೊಂಡರು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.

ಬೇರೊಂದು ಮನೆಯಲ್ಲಿ ಕೆಲಸ ಮಾಡಿ , ಉಡುಪಿಯ ಪ್ರತಿಷ್ಠಿತ ಸರ್ಕಾರಿ ಕಾಲೇಜಿನಲ್ಲಿ ಪವಿತ್ರಾ ಪ್ರಥಮ ಪಿಯುಸಿ ಓದಿದರು. ಸಹೋದರ ಸಂಬಂಧಿ ಮಲ್ಲೇಶ ವಾರದ ಹಿಂದಷ್ಟೇ ಗಾರೆ ಕೆಲಸಕ್ಕೆ ಎಂದು ಉಡುಪಿಗೆ ಬಂದಿದ್ದ. ತನ್ನ ತಾಯಿ ಮತ್ತು ಪವಿತ್ರಾ ತಾಯಿ ಹನುಮವ್ವ ಅಕ್ಕ-ತಂಗಿಯಾಗಿರುವ ಕಾರಣ ಚಿಕ್ಕಮ್ಮನ ಮನೆಯಲ್ಲೇ ಉಳಿದುಕೊಂಡಿದ್ದ. ಹನುಮವ್ವ ರಾಯಚೂರಿಗೆ ಹೋಗಿದ್ದ ಸಂದರ್ಭ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣಾ ಘಟನೆ ನಡೆದಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆದಿದೆ.

ಇದನ್ನೂ ಓದಿ: ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳು ಸಾವು; ಮುಗಿಲು ಮುಟ್ಟಿದ ಆಕ್ರಂದನ

ಪ್ರೇಮ ವೈಫಲ್ಯ: ಯುವಕ ಆತ್ಮಹತ್ಯೆ

ಪ್ರೇಯಸಿ ಜೊತೆಗಿರುವ ಖಾಸಗಿ ವಿಡಿಯೋ ಇಟ್ಟುಕೊಂಡು ಗೆಳೆಯ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್‌ನಲ್ಲಿ ನಡೆದಿದೆ. ಮೃತ ಯುವಕನನ್ನು ನಿಟ್ಟೆಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಬಗ್ಗೆ ಡೆತ್ ನೋಟ್ ಬರೆದಿರುವ ಅಭಿಷೇಕ್, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ. ಆದರೆ ಘಟನೆಯ ಬಗ್ಗೆ ಕಾರ್ಕಳ ಪೊಲೀಸರು ತನಿಖೆ ನಡೆಸಿದ್ದು, ಪ್ರೇಮ ವೈಫಲ್ಯದಿಂದ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಆದೇಶಿಸಿದ್ದಾರೆ. ಅಭಿಷೇಕ್ ಪ್ರೀತಿಸಿದ ಯುವತಿಗೆ ಮದುವೆಯಾಗಿದ್ದು, ಆತ ಖಿನ್ನತೆಗೆ ಒಳಗಾಗಿದ್ದ. ಹೀಗಾಗಿ ಆತನ ಆರೋಪ ಸುಳ್ಳು ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *