ಶಿವಮೊಗ್ಗ, ನವೆಂಬರ್ 27: ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಆಂತರಿಕ ಕಿತ್ತಾಟ ಮತ್ತು ಅಭಿವೃದ್ಧಿ ಕಾರ್ಯಗಳ ಕೊರತೆಯ ಬಗ್ಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಕಳೆದ ಆರೆಂಟು ತಿಂಗಳಿಂದ ಸರ್ಕಾರವು ಮುಖ್ಯಮಂತ್ರಿ ಸ್ಥಾನಕ್ಕಾಗಿ ಬಡಿದಾಟದಲ್ಲಿ ನಿರತವಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳ ಕಡೆ ಗಮನ ಕೊಡುತ್ತಿಲ್ಲ. ಈ ಕುರಿತು ರಾಜ್ಯದ ಜನತೆ ಬೇಸತ್ತಿದ್ದು, ಛೀಮಾರಿ ಹಾಕುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಅವರು ಹೇಳಿದ್ದಾರೆ. ಜೊತೆಗೆ, ರಾಜಕೀಯದಲ್ಲಿ ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು ಎಂಬ ವಾತಾವರಣವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 5:53 pm, ಗುರುವಾರ, 27 ನವೆಂಬರ್ 25