
ಬೆಂಗಳೂರು, ಮಾರ್ಚ್ 6: ಸಿದ್ದರಾಮಯ್ಯ ಅವರ ದಾಖಲೆಯ 2026 ರ ಬಜೆಟ್‌ನಲ್ಲಿ ಪ್ರಮುಖಾಂಶಗಳಲ್ಲಿ ಮೈಸೂರನ್ನು ಐಟಿ ಹಬ್ ಆಗಿ ರೂಪಿಸಲು ಯೋಜನೆಯು ಒಂದು. ಬೆಂಗಳೂರಿನಲ್ಲಿ ವಾಹನಗಳ ದಟ್ಟಣೆ ಕಡಿಮೆ ಮಾಡಲು ಮತ್ತು ವಿಕೇಂದ್ರ ಆರ್ಥಿಕತೆಗೆ ಉತ್ತೇಜನ ನೀಡಲು ಮೈಸೂರನ್ನು ರಾಜ್ಯದ ಎರಡನೇ ಐಟಿ ಹಬ್ ಆಗಿ ರೂಪಿಸಲಾಗಿದೆ ಎಂದು ಬಜೆಟ್ನಲ್ಲಿ ಪ್ರಕಟಿಸಲಾಗಿದೆ. ಬೆಂಗಳೂರಿನಿಂದ ದಕ್ಷಿಣಕ್ಕೆ ಮೈಸೂರು 140 ಕಿಮೀ ದೂರದಲ್ಲಿದೆ. ಮೈಸೂರಿನಲ್ಲಿ ಸಾಕಷ್ಟು ಕೈಗಾರಿಕೆಗಳು ನೆಲಸಿವೆ. ಐಟಿ ಕಂಪನಿಗಳೂ ಬಹಳಷ್ಟಿವೆ. ಕಾಗ್ನೈಜೆಂಟ್ ಟೆಕ್ನಾಲಜೀಸ್, ಇನ್ಫೋಸಿಸ್ ಇತ್ಯಾದಿ 180-200 ಟೆಕ್ ಕಂಪನಿಗಳಲ್ಲಿ 30,000 ಜನರು ಕೆಲಸ ಮಾಡುತ್ತಿದ್ದಾರೆ.
ಈಗ ಮೈಸೂರಿಗೆ ಮತ್ತಷ್ಟು ಟೆಕ್ ಸ್ಪರ್ಶ ನೀಡಲು ವಿವಿಧ ಯೋಜನೆಗಳನ್ನು ಹಾಕಲಾಗಿದೆ. ಅರಮನೆನಗರಿಯಲ್ಲಿ ಎಐ ಲ್ಯಾಬ್‌ಗಳು, ಸ್ಟಾರ್ಟಪ್‌ಗಳನ್ನು ವೀಕ್ಷಿಸಲು ಸೂಚಿಸಲಾಗಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ತವರು ಜಿಲ್ಲೆಗೆ ಭರ್ಜರಿ ಕೊಡುಗೆ ನೀಡಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಬಜೆಟ್ 2026 ಮುಖ್ಯಾಂಶಗಳು: ಸಿಎಂ ಸಿದ್ದರಾಮಯ್ಯ 3 ಗಂಟೆ 5 ನಿಮಿಷ ಮಂಡಿಸಿದ 2026-27ರ ಬಜೆಟ್ ಮುಖ್ಯಾಂಶ ಇಲ್ಲಿದೆ
ಬಜೆಟ್ ನಲ್ಲಿ ಮೈಸೂರಿಗೆ ಸಿಕ್ಕ ಕೊಡುಗೆಗಳು…
- ಮೈಸೂರಿನ ತಾಂಡವಪುರದಲ್ಲಿ ಸಿಲ್ಕ್ ಪಾರ್ಕ್ ಸ್ಥಾಪನೆ ಮಾಡಲಾಗಿತ್ತು. ರಾಜ್ಯದ ಐದು ಹೊಸ ಸಿಲ್ಕ್ ಪಾರ್ಕ್‌ಗಳಲ್ಲಿ ಇದೂ ಒಂದಾಗಲಿದೆ.
- ಮೈಸೂರು ಮತ್ತು ಕಲಬುರಗಿಯಲ್ಲಿ ತಲಾ 16 ಕೋಟಿ ರೂ. ಷ್ನೈಡರ್ ಇಲೆಕ್ಟ್ರಾನಿಕ್ ವೆಚ್ಚದ (Schneider Electric) ಯೂತ್ ಇಂಪ್ಯಾಕ್ಟ್ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿದೆ.
- ಮೈಸೂರು ವಿಮಾನ ನಿಲ್ದಾಣ ಸಮೀಪ ಕೆಐಎಡಿಬಿ ಸಂಸ್ಥೆ ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿ
- ಬೆಂಗಳೂರಿನ ದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ವಿಕೇಂದ್ರೀಕೃತ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಮೈಸೂರು ನಗರವನ್ನು ರಾಜ್ಯದ ಎರಡನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗಿದೆ.
- ಮೈಸೂರು ಮೃಗಾಲಯ ಅಭಿವೃದ್ಧಿಗಾಗಿ ಪಿಪಿಪಿ ಮಾದರಿಯಲ್ಲಿ ಪ್ರಕೃತಿ ನಿರೂಪಣಾ ಕೇಂದ್ರದ ಸ್ಥಾಪನೆ
- ಮೈಸೂರು ಫಿಲಂ ಸಿಟಿಯಲ್ಲಿ ಅನುಕೂಲವಾಗುವಂತೆ ಪಿಪಿಪಿ ಮಾದರಿಯಲ್ಲಿ ಥೀಮ್ ಪಾರ್ಕ್, ಸ್ಟಾರ್ ಹೋಟೆಲ್, ರೆಸ್ಟೋರೆಂಟ್ ನಿರ್ಮಾಣ.
- ಮೈಸೂರಿನಲ್ಲಿ ಇಕೋರ್ಟ್ ಅನ್ನು ಪ್ರಾಯೋಗಿಕವಾಗಿ ಸ್ಥಾಪಿಸಲಾಗುವುದು.
- ಮೈಸೂರಿನ ಬಂಬೂ ಬಜಾರ್ ಕೇಂದ್ರದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ.
- ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ
- ಮೈಸೂರಿನಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ನಡೆಸಲಾಗುವುದು.
ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ