ರಾಶಿ ರಾಶಿ ಆಧಾರ್ ಕಾರ್ಡ್ ಪತ್ತೆಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ
ಮಂಗಳೂರು, ಮಾರ್ಚ್ 05: ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ಗಳು ಇವೆ. ನದಿ ತೀರದಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ಆಧಾರ್ ಕಾರ್ಡ್ ಕಂಡು ಸಾರ್ವಜನಿಕರು ಶಾಕ್ ಆಗಿದ್ದು, ಈ ಬಗ್ಗೆ ಪಂಚಾಯತ್ ಅಧ್ಯಕ್ಷರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಧ್ಯಕ್ಷರು ಸಾರ್ವಜನಿಕರ ಜೊತೆಗೂಡಿ ನೂರಾರು ಆಧಾರ್ ಕಾರ್ಡ್‌ಗಳನ್ನು ಸಂಗ್ರಹಿಸಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು, ಅಂಚೆ ಇಲಾಖೆಯಿಂದ ಸರಿಯಾದ ಆಧಾರ್ ಕಾರ್ಡ್ ತಲುಪುತ್ತಿಲ್ಲವೆಂದು ಆರೋಪಿಸಿದ್ದಾರೆ.
ತಮ್ಮ ಕುಟುಂಬದವರ ಎಲ್ಲರ ಆಧಾರ್ ಕಾರ್ಡ್ ನದಿಯಲ್ಲಿ ಸಿಕ್ಕಿದೆ. ಗ್ರಾಮದ ನೂರಾರು ಜನರ ಕಾರ್ಡ್‌ಗಳು ಸಹ ಸೇರಿವೆ. ಹಣ ಪಾವತಿಸಿ ವಿಳಾಸ, ಹೆಸರು ಬದಲಾವಣೆ ಮಾಡಿದವರು ಪರಿಷ್ಕೃತ ಕಾರ್ಡ್ ಈಗ ಬರಬಹುದು ಎಂದು ಕಾಯುತ್ತಿದ್ದಾರೆ ಅವೆಲ್ಲವೂ ಈಗ ನದಿ ನೀರಿನಲ್ಲಿ ತೇಲಿಬರುತ್ತಿರೋದು ಕಂಡುಬಂದಿದೆ. ಅಧಿಕಾರಿಗಳು ಬೇಜವಾಬ್ದಾರಿಯಿಂದಲೇ ಈ ಘಟನೆ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಇದನ್ನೂ ಓದಿ: ನಿಮ್ಮ ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ನಂಬರ್ ಬದಲಿಸುವುದು ಹೇಗೆ?
ತನಿಖೆಗೆ ಸೂಚಿಸಿದ ಸ್ಪೀಕರ್ ಯು.ಟಿ. ಖಾದರ್
ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಮಾರ್ಚ್ 03, 2026 ರಂದು ಅಪಾರ ಪ್ರಮಾಣದ ಆಧಾರ್ ಕಾರ್ಡ್‌ಗಳು ನದಿ ತಟದಲ್ಲಿರುವುದನ್ನು ಕಂಡು ಸಾರ್ವಜನಿಕರು ಸ್ಥಳೀಯ ಪುದು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸ್ಥಳೀಯ ಶಾಸಕನಾದ ನನಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ಬಂದಿದೆ. ಆಧಾರ್ ಕಾರ್ಡ್‌ಗಳು ಇಷ್ಟೊಂದು ಪ್ರಮಾಣದಲ್ಲಿ ನದಿ ತಟದಲ್ಲಿ ಸೇರಿಸಲು ಕಾರಣವೇನು? ಮತ್ತು ಇದಕ್ಕೆ ಕಾರಣರಾದವರು ಯಾರೆಂಬುದನ್ನು ತನಿಖೆ ನಡೆಸಿ ಪತ್ತೆ ಹಚ್ಚಿ ತಮ್ಮ ಇಲಾಖೆಯ ಮುಖಾಂತರ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಯು.ಐ.ಡಿ.ಎ.ಐ ಯೋಜನಾ ವ್ಯವಸ್ಥಾಪಕರ ವಿಧಾನ ಸಭೆ ಸ್ಪೀಕರ್ ಮತ್ತು ಸ್ಥಳೀಯ ಶಾಸಕ ಯು.ಟಿ. ಖಾದರ್ ಸೂಚಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 2:56 pm, ಗುರು, 5 ಮಾರ್ಚ್ 26