ಚಿತ್ರದುರ್ಗ, ಡಿ.25: ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಭೀಕರ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 17ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದು ಪರಿಣಾಮ ಖಾಸಗಿ ಬಸ್ಸೊಂದು ಹೊತ್ತಿಉರಿದಿದೆ. ಖಾಸಗಿ ಸ್ಲೀಪರ್ ಕೋಚ್ ಬಸ್ನಲ್ಲಿ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ ಪ್ರಯಾಣಿಕರ ಗಂಭೀರ ಗಾಯಗಳಾಗಿದ್ದರೆ, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಗ ಈ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಒಂದು ಕಡೆಯಿಂದ ಬರುತ್ತಿದ್ದ ಲಾರಿಯೊಂದು ಡಿವೈಡರ್ ಹಾರಿ ಮತ್ತೊಂದು ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್ ಕೋಚ್ ಬಸ್ ರಸ್ತೆ ಮಧ್ಯೆ ಹೊತ್ತಿ ಉರಿದಿದೆ. ಈ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ. ಇನ್ನು ಈ ಲಾರಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳಿದೆ ಎಂದು ಹೇಳಲಾಗಿದೆ. ಬಸ್ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿದೆ. ಇದೀಗ ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣಾದಲ್ಲಿ ಘಟನೆಗೆ ದೂರು ದಾಖಲಾಗಿದೆ.
ಹೆಚ್ಚಿನ ಮಾಹಿತಿಯನ್ನು ಅಪ್ಡೇಟ್ ಮಾಡಲಾಗುವುದು….
ರಂದು ಪ್ರಕಟಿಸಲಾಗಿದೆ – 6:18 am, ಗುರು, 25 ಡಿಸೆಂಬರ್ 25