ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ಕರ್ನಾಟಕ ಕೇಸರಿ ಪಾಳಯದಲ್ಲಿ ಮಹತ್ವದ ಬೆಳವಣಿಗೆ: ಅಧಿವೇಶ ಬಿಟ್ಟು ದಿಲ್ಲಿಗೆ ಹಾರಿದ ವಿಜಯೇಂದ್ರ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ಕರ್ನಾಟಕ ಕೇಸರಿ ಪಾಳಯದಲ್ಲಿ ಮಹತ್ವದ ಬೆಳವಣಿಗೆ: ಅಧಿವೇಶ ಬಿಟ್ಟು ದಿಲ್ಲಿಗೆ ಹಾರಿದ ವಿಜಯೇಂದ್ರ


ಬೆಂಗಳೂರು, (ಡಿಸೆಂಬರ್ 16): ಬಹುದಿನಗಳಿಂದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯನ್ನು ಮುಂದುವರೆಸಲಾಗಿದೆ. ಆದರೆ, ಈಗ ದಿಧೀರ್ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ (ಕಾರ್ಯಾಧ್ಯಕ್ಷ) ನೇಮಕವಾಗಿದೆ. ಅದರಲ್ಲೂ ಅಚ್ಚರಿ ಎಂಬಂತೆ ಮೋದಿ ಹಾಗೂ ಅಮಿತ್ ಶಾ ವರ್ಷದ ಅಚ್ಚರಿ ಎಂಬಂತೆ ನಿತಿನ್ ನವ’ (ನಿತಿನ್ ನಬಿನ್) ಅವರನ್ನು ಕಾರ್ಯಾಧ್ಯಕ್ಷ ವಹಿಸಿದ್ದಾರೆ. ಬಿಜೆಪಿಯ ನೂತನ ಕಾರ್ಯಾಧ್ಯಕ್ಷನಿತಿನ್ ನಬಿನ್, ಪಕ್ಷದ ಇತಿಹಾಸದಲ್ಲಿ ಈ ಹುದ್ದೆಯನ್ನು ಅಲಂಕರಿಸಿದ ಎರಡನೇ ವ್ಯಕ್ತಿಯಾಗಿದ್ದಾರೆ. ಇದಕ್ಕೂ ಮೊದಲು ಬಿಜೆಪಿಯ ಹಾಲಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಹೀಗಾಗಿ ನಿತಿನ್ ನಬಿನ್ ಅವರೇ ಮುಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು. ಹೀಗಾಗಿ ಅವರನ್ನು ನೇಮಕ ಕಾರ್ಯಾಧ್ಯಕ್ಷ ಮಾಡಿ ಬಳಿಕ ನಡ್ಡಾ ಅವರ ಸ್ಥಾನಕ್ಕೆ ಆಯ್ಕೆಯಾಗುವಂತೆ ಸೂಚಿಸಿದ್ದಾರೆ.

ಹೀಗಾಗಿ ಕರ್ನಾಟಕ ಬಿಜೆಪಿಯಲ್ಲೂ ಸಹ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಅಧಿವೇಶ ಬಿಟ್ಟು ದೆಹಲಿಗೆ ಹಾರಿದ್ದಾರೆ. ನೂತನ ಕಾರ್ಯಾಧ್ಯಕ್ಷ ನಿತಿನ್ ನಬಿನ್ ಅಧಿಕಾರ ಸ್ವೀಕಾರ ವಿಜಯೇಂದ್ರ ದೆಹಲಿಗೆ ತೆರಳಿರುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ಕೇಳಿಬರುತ್ತಿರುವ ವಿಜಯೇಂದ್ರ ಮೊದಲೇ ಮುಂದಿನ ರಾಷ್ಟ್ರೀಯ ಅಧ್ಯಕ್ಷರು ಎಂದು ನಿತಿನ್ ನಬಿನ್ ಅವರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ.

ಇದನ್ನೂ ಓದಿ: ಅಚ್ಚರಿ ಆಯ್ಕೆ: ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಯುವ ನಾಯಕನಿಗೆ ಮಣೆ

ಒಟ್ಟಿನಲ್ಲಿ ಬಿಜೆಪಿ ಹೈಕಮಾಂಡ್‌ನಲ್ಲಿ ಮಹತ್ವದ ಬದಲಾವಣೆಗಳು ಆಗುತ್ತಿಲ್ಲ ಇತ್ತ ರಾಜ್ಯ ಬಿಜೆಪಿಯಲ್ಲೂ ರಾಜಕೀಯ ಚಟುವಟಿಕೆಗಳು ಗರಿಗೆದರಿದಂತೂ ಸತ್ಯ.



Source link

Leave a Reply

Your email address will not be published. Required fields are marked *