
ಬಾಗಲಕೋಟೆ, ಮಾರ್ಚ್ 30: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9 ರಂದು. ಈ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಪ್ರಚಾರ ನಡೆಸಿದ ಬಿವೈ ವಿಜಯೇಂದ್ರ, ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚಾರಕ್ಕೆ ಬಂದರೆ ಸ್ವಾಗತಿಸುತ್ತೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದವರೇ ಒಳಗೊಳಗೆ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಹಕಾರ ನೀಡುತ್ತಿದ್ದಾರೆ. ಯಾರೇ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದರೂ, ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಿದರೂ ಅದನ್ನು ಸ್ವಾಗತಿಸುವುದಾಗಿದೆ.
ಬಿಜೆಪಿಯಲ್ಲಿ 20 ಬಾಗಿಲು ತೆರೆಯಲಾಗಿದೆ ಎಂಬ ಸಚಿವ ಎಂಬಿ ಪಾಟೀಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಚುನಾವಣೆ ಫಲಿತಾಂಶ ಬರಲಿ. ಯಾವ ಪಕ್ಷದಲ್ಲಿ ಎಷ್ಟು ಬಗ್ಗೆ ಇದೆ ಎಂಬುದು ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ