Headlines

ದೆಹಲಿಯಲ್ಲಿ ನಡೆದ ಕಾರು ಸ್ಫೋಟ ಆತ್ಮಾಹುತಿ ದಾಳಿ?: ತನಿಖಾ ಸಂಸ್ಥೆಗಳ ಶಂಕೆ

ದೆಹಲಿಯಲ್ಲಿ ನಡೆದ ಕಾರು ಸ್ಫೋಟ ಆತ್ಮಾಹುತಿ ದಾಳಿ?: ತನಿಖಾ ಸಂಸ್ಥೆಗಳ ಶಂಕೆ


ದೆಹಲಿ, ನವೆಂಬರ್ 11: ಕೆಂಪುಕೋಟೆ ಸಮೀಪದಲ್ಲಿ ಸಂಭವಿಸಿದ ಭೀಕರ ಕಾರು ಸ್ಫೋಟದಿಂದ ಜನ ಬೆಚ್ಚಿಬಿದ್ದಿದ್ದಾರೆ. ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ ಒಂದರ ಬಳಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಘಟನೆಯು ಭಯೋತ್ಪಾದಕ ಕೃತ್ಯವಾಗಿರುವ ಬಗ್ಗೆ ತನಿಖಾ ಸಂಸ್ಥೆಗಳು ಶಂಕೆ ವ್ಯಕ್ತಪಡಿಸಿವೆ. ಕಾರಿನಲ್ಲಿ ಸ್ಫೋಟಕಗಳನ್ನು ಇರಿಸಿ ಸ್ಫೋಟಿಸಬಹುದು ಅಥವಾ ಇದು ಆತ್ಮಾಹುತಿ ದಾಳಿಯಾಗಿರಬಹುದು ಎಂದು ಪ್ರಾಥಮಿಕವಾಗಿ ಅನುಮಾನಿಸಲಾಗಿದೆ. ಸ್ಫೋಟಗೊಂಡ ಐ20 ಕಾರಿನೊಳಗೆ ಒಬ್ಬ ವ್ಯಕ್ತಿ ಇದ್ದ, ಆತನ ಗುರುತು ಇನ್ನೂ ಇನ್ನೂ ಇಲ್ಲ. ಮೃತದೇಹದ ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತಿದೆ. ಪುಲ್ವಾಮಾದ ತಾರೀಖ್ ಎಂಬಾತ ಈ ಕಾರಿನ ಮಾಲೀಕ ಎಂದು ತಿಳಿದುಬಂದಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *