
ದೇವನಹಳ್ಳಿ, ಮಾರ್ಚ್ 29: ಯೂಟರ್ನ್ ಪಡೆಯುತ್ತಿದ್ದ ಟ್ರಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡ ಘಟನೆ ಹೊಸಕೋಟೆ-ಕೋಲಾರ ರಸ್ತೆಯ ಹಲಸಹಳ್ಳಿ ಗೇಟ್ ಬಳಿ ನಡೆದಿದೆ. ಡಿಕ್ಕಿಯ ರಬಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಸಂಪೂರ್ಣ ಕಾರು ಮತ್ತು ಟ್ರಕ್ನ ಸ್ವಲ್ಪ ಭಾಗ ಸುತ್ತು ಕರಕಲಾಗಿದೆ. ಅಪಘಾತದ ಬಳಿಕ ಕಾರಿನಲ್ಲಿ ಸಿಲುಕಿದ್ದ ಚಾಲಕನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದು, ಅಪಘಾತವಾಗ್ತಿದ್ದಂತೆ ಟ್ರಕ್ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಹೊಸಕೋಟೆ ಸಂಚಾರ ಭೇಟಿ ನೀಡಿದ್ದು, ಪರಿಶೀಲನೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.