
ಚಿಕ್ಕಬಳ್ಳಾಪುರ, ಏಪ್ರಿಲ್ 02: ಕಂಟೇನರ್ ಗೆ ಹಿಂದಿನ ಕಾರು ಡಿಕ್ಕಿ (ಅಪಘಾತ) ಹೊಡೆದ ಪರಿಣಾಮ ಇಬ್ಬರು ದುರ್ಮರಣ (ಸಾವು) ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಕ್ರಾಸ್ ಬಳಿ ಘಟನೆ ನಡೆದಿದೆ. 5 ತಿಂಗಳ ಹಿಂದೆ ಮದುವೆಯಾಗಿದ್ದ ರಕ್ಷಿತಾ ರೆಡ್ಡಿ(28) ಮತ್ತು ಸಂಬಂಧಿ ಪವನ್ ರೆಡ್ಡಿ(30) ಸ್ಥಳದಲ್ಲೇ ಸಾವನ್ನಪ್ಪಿದ್ದು, ರಕ್ಷಿತಾ ಪತಿ ರಾಜಶೇಖರರೆಡ್ಡಿ ಗಂಭೀರವಾಗಿದೆ. ಪೆರೇಸಂದ್ರ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.
ನಡೆದಿದ್ದೇನು?
ರಕ್ಷಿತಾ ರೆಡ್ಡಿ ಮತ್ತು ರಾಜಶೇಖರ ರೆಡ್ಡಿ ಕಳೆದ 5 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ದಂಪತಿ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದರು. ಸ್ವಗ್ರಾಮ ಆಂಧ್ರದ ಅನಂತಪುರದ ಅವಳಿಗೆ ತೆರಳಲು. ಈ ವೇಳೆ ಶೆಟ್ಟಿಗೆರೆ ಕ್ರಾಸ್ ಬಳಿ ಕಂಟೇನರ್ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಚಿಕ್ಕಬಳ್ಳಾಪುರ ಬೈಪಾಸ್ ನಲ್ಲಿ ಸರಣಿ ಅಪಘಾತ ರಸ್ತೆ
ಬೆಂಗಳೂರು ಹೈದರಾಬಾದ್ ಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರ ಬೈಪಾಸ್ ನಲ್ಲಿ 2 ಕಾರು, 2 ಲಾರಿ ಮತ್ತಾಯ 1 ಟ್ಯಾಂಕರ್ ಮಧ್ಯೆ ಸರಣಿ ರಸ್ತೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ರಸ್ತೆ ಬದಿ ಸಿಮೆಂಟ್ ಟ್ಯಾಂಕರ್ ಉರುಳಿಬಿದ್ದಿದೆ.
ಇದನ್ನೂ ಓದಿ: ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ, ಮೈಜುಂ ಎನ್ನಿಸೋ ವಿಡಿಯೋ ವೈರಲ್
ವಾಹನದಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಘಟನೆಯಿಂದ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು. ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಖಾಸಗಿ ವೋಲ್ವೋ ಬಸ್ಗೆ ಟಿಪ್ಪರ್ ಡಿಕ್ಕಿ: ಅದೃಷ್ಟವಶಾತ್ ಪ್ರಯಾಣಿಕರು ಪಾರು
ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ಕ್ರಾಸ್ ಬಳಿಯ ಹೈದರಾಬಾದ್ನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ವೋಲ್ವೋ ಬಸ್ಗೆ ಟಿಪ್ಪರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ಹಾವೇರಿಯಲ್ಲಿ ಭೀಕರ ದುರಂತ: ನಿಲ್ದಾಣದಲ್ಲಿದ್ದ ಜನರ ಮೇಲೆ ನುಗ್ಗಿದ ಬಸ್, ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ವಿಡಿಯೋ
ರಸ್ತೆ ಡಿವೈಡರ್ ದಾಟಿ ಎದುರು ಬರುತ್ತಿದ್ದ ಬಸ್ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಟಿಪ್ಪರ್ ಚಾಲಕನಿಗೆ ಗಂಭೀರ ಗಾಯ ಸ್ಥಳಕ್ಕೆ ಪೆರೇಸಂದ್ರ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.