ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿ ಬಿದ್ದ ಕಾರು

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿ ಬಿದ್ದ ಕಾರು


ಬೀದರ್, (ಡಿಸೆಂಬರ್ 18): ಬೈಕ್ ಸವಾರನನ್ನ ಬಚಾವು ಮಾಡಲು ಹೋಗಿ ಕಾರು ಹತ್ತು ಅಡಿ ಮೇಲೆ ಹಾರಿ ಬುಗುರಿ ತಿರುಗಿ ತಿರುಗಿ ಮತ್ತೆ ರಸ್ತೆ ಮೇಲೆ ಬಿದ್ದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೌಡಿಯಾಳ ಬಳಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಕಾರಿಗೆ ಬೈಕ್ ಅಡ್ಡ ಬಂದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಹತ್ತು ಅಡಿ ಮೇಲಕ್ಕೆ ಹಾರಿ ಬಿದ್ದಿದ್ದು, ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *