ಬೆಂಗಳೂರು, ಅ.21: ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಬಗ್ಗೆ ವಿದೇಶಿಗರು, ಬೆಂಗಳೂರಿನ ದೈತ್ಯ ಕಂಪನಿಗಳು ಒಂದಲ್ಲ ಒಂದು ಪೋಸ್ಟ್ ಮಾಡಿ ಸರ್ಕಾರವನ್ನು ಕೇಳುವ ಪ್ರಶ್ನೆ ಇದೆ. ಇದರ ನಡುವೆ ರಸ್ತೆ ಗುಂಡಿಗಳಿಂದ ಹಲವು ಅಪಘಾತಗಳು ಕೂಡ ವರದಿಯಾಗಿದೆ. ಇದೀಗ ಮತ್ತೊಂದು ಅಪಘಾತವಾಗಿದೆ. ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ತಡೆಗೋಡೆ ಹೋಗಿ ಕಾರು ಪಲ್ಟಿಯಾಗಿದೆ. ಕುಣಿಗಲ್ ಬೈಪಾಸ್ ಫ್ಲೈ ರಸ್ತೆಯಲ್ಲಿ ಈ ಘಟನೆ ನಡೆದಿದೆ. ರಸ್ತೆಯ ಮಧ್ಯೆ ಇದ್ದ ದೊಡ್ಡ ಗುಂಡಿಯನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದನು, ಈ ವೇಳೆ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ನಿರ್ಮಾಣ ಸಂಪೂರ್ಣವಾಗಿ ಡ್ಯಾಮೇಜ್ ಆಗಿದೆ ರಾಷ್ಟ್ರೀಯ ಹೆದ್ದಾರಿಯಂತಹ ಪ್ರಮುಖ ರಸ್ತೆಯಲ್ಲಿ ಇಂತಹ ಗುಂಡಿಗಳು ಕಾಣಿಸಿಕೊಂಡಿರುವುದು ರಸ್ತೆ ನಿರ್ವಹಣೆಯ ವೈಫಲ್ಯವನ್ನು ಎತ್ತಿ ತೋರಿಸಿದೆ. ಈ ಘಟನೆ ರಸ್ತೆ ಗುಂಡಿಗಳಿಗೆ ಶಾಶ್ವತ ಪರಿಹಾರದ ಅಗತ್ಯವಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ