ಇರಾನ್ ಮತ್ತು ಇಸ್ರೇಲ್ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳಲ್ಲಿ ನಡೆಯಬೇಕಿದ್ದ ಸಿಬಿಎಸ್ (ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್) 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿರುವ ಸಿಬಿಎಸ್ಇ ಮಂಡಳಿ, ಗಲ್ಫ್ ದೇಶಗಳಲ್ಲಿ ಪರೀಕ್ಷೆ ಬರೆಯಲು ಸಾವಿರಾರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ನಾಳೆಯಿಂದ(ಮಾರ್ಚ್ 2) ಪ್ರಾರಂಭವಾಗಬೇಕಿದ್ದ ಪರೀಕ್ಷೆಗಳು ಮಧ್ಯಪ್ರಾಚ್ಯದ ಇರಾನ್, ಬಹ್ರೇನ್, ಕುವೈತ್, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಓಮನ್, ಕತಾರ್ ಈ ಏಳು ಪ್ರಮುಖ ದೇಶಗಳಲ್ಲಿ ಮುಂದೂಡಲಾಗಿದೆ. ಪ್ರಸ್ತುತ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಬಳಿಕವೇ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಂಡಳಿ ಸ್ಪಷ್ಟಪಡಿಸಿದೆ.
ಮಧ್ಯಪ್ರಾಚ್ಯ ಪ್ರದೇಶಗಳಲ್ಲಿ CBSE ತರಗತಿ X ಮತ್ತು XII ತರಗತಿಯ ಪರೀಕ್ಷೆಗಳಲ್ಲಿ ಪ್ರಮುಖವಾದ ನವೀಕರಣ pic.twitter.com/6rVteajQFV
— CBSE HQ (@cbseindia29) ಮಾರ್ಚ್ 1, 2026
ಅಧಿಕೃತ ಪ್ರಕಟಣೆಯಲ್ಲಿ, “ವಿದ್ಯಾರ್ಥಿಗಳ ಸುರಕ್ಷತೆಯೇ ನಮಗೆ ಅತ್ಯಂತ ಮುಖ್ಯ. ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮಾರ್ಚ್ 2 ರ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಶೀಘ್ರದಲ್ಲೇ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ” ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ದ್ವಿತೀಯ ಪಿಯು ಪರೀಕ್ಷೆಗೂ ಮುನ್ನ ಆತಂಕ; ಪ್ರಶ್ನೆ ಪತ್ರಿಕೆ ಬೇಕಾದರೆ ಮೆಸೇಜ್ ಮಾಡಿ ಎಂಬ ಪೋಸ್ಟ್ ವೈರಲ್!
ಇದಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳು ಅಥವಾ ನಕಲಿ ಸುತ್ತೋಲೆಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದು ವಿದ್ಯಾರ್ಥಿಗಳು ಮತ್ತು ಪೋಷಕರ ಮಂಡಳಿ ಮನವಿ ಮಾಡಿದೆ. ಪರೀಕ್ಷೆಗಳ ಕುರಿತು ನಿಖರ ಮತ್ತು ಅಧಿಕೃತ ಮಾಹಿತಿಗಾಗಿ ಕೇವಲ ಸಿಬಿಎಸ್ಇ ಅಧಿಕೃತ ವೆಬ್ಸೈಟ್ cbse.gov.in ಅನ್ನು ಮಾತ್ರ ಪರಿಶೀಲಿಸುವಂತೆ ಸೂಚಿಸಲಾಗಿದೆ. ಈ ನಿರ್ಧಾರವು ತಾತ್ಕಾಲಿಕವಾಗಿದ್ದಾಗ, ಪರಿಸ್ಥಿತಿ ಸಾಮಾನ್ಯವಾದ ಬಳಿಕ ಹೊಸದನ್ನು ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.
ಶಿಕ್ಷಣಕ್ಕೆ ಸಂಬಂಧಿಸಿದ ಹೆಚ್ಚಿನ ಸುದ್ದಿಗಳನ್ನು ಓದಲಾಗಿದೆ ಇಲ್ಲಿ ಕ್ಲಿಕ್ ಮಾಡಿ: