Headlines

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ: ಸೋಮವಾರದಿಂದಲೇ ಖರೀದಿ ಆರಂಭದ ಭರವಸೆ

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ: ಸೋಮವಾರದಿಂದಲೇ ಖರೀದಿ ಆರಂಭದ ಭರವಸೆ


ತುಂಬಾಕು ಬೆಳೆಗಾರರ ​​ನೆರವಿಗೆ ನಿಂತ ಕೇಂದ್ರ ಸರ್ಕಾರ: ಸೋಮವಾರದಿಂದಲೇ ಖರೀದಿ ಆರಂಭದ ಭರವಸೆ

ದೆಹಲಿ, ಮಾರ್ಚ್ 13: ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತುಂಬಾಕು ರೈತರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರ ಜತೆ ಮಾತುಕತೆ ನಡೆಸಿದ್ದು, ಸಚಿವ ಗೋಯಲ್ ಅವರಿಗೆ ತುಂಬಾ ಬೆಳೆಗಾರರ ​​ಮನವರಿಕೆ ಮಾಡಿ ಕೊಡಲಾಗಿದೆ. ಆ ಬೆನ್ನಲ್ಲೇ ತುಂಬಾಕು ಬೆಳೆಗಾರರ ​​ನೆರವಿಗೆ ಕೇಂದ್ರ ಸರಕಾರ ಧಾವಿಸಿದೆ.

ಸೋಮವಾರದಿಂದಲೇ ಸಾಕಷ್ಟು ಖರೀದಿ, ವಿದೇಶ ಮಾರುಕಟ್ಟೆಗಳಿಗೆ ರಫ್ತು, ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆ ಸೇರಿದಂತೆ ಬೆಳೆಗಾರ ಬೇಡಿಕೆಗಳಿಗೆ ಅತ್ಯಂತ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಜೊತೆಗೆ, ಈ ಸಂದರ್ಭದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿನ ಶಮನಕ್ಕೆ ಪರಿಹಾರವಾಗುತ್ತಿರುವಾಗ ಸಚಿವ ಗೋಯಲ್ ಅವರು ತಮ್ಮ ಸಚಿವಾಲಯದ ಉನ್ನತ ಅಧಿಕಾರಿಗಳು ಮತ್ತು ತುಂಬಾ ಖರೀದಿಸುವ ಉದ್ಯಮದ ಪ್ರಮುಖರೊಂದಿಗೆ ಮಾತನಾಡಿ ಬೆಳೆಗಾರರ ​​ನೆರವಿಗೆ ಬರುವಂತೆ ಸೂಚಿಸಿರೋದಾಗಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕುರ್ಚಿ ಕಿತ್ತಾಟದ ನಡುವೆ ಮುಂದಿನ ರಾಜಕೀಯ ಜೀವನದ ಬಗ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ಮಾತು!

ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರ ಉಪಸ್ಥಿತಿಯಲ್ಲಿ ಈ ಸಭೆಯಲ್ಲಿ ಮಾಜಿ ಸಚಿವರಾದ ಸಾ.ರಾ. ಮಹೇಶ್, ಮೈಸೂರು-ಕೊಡಗು ಸಂಸದರಾದ ಯದುವೀರ್ ಚಾಮರಾಜೇಂದ್ರ ಕೃಷ್ಣದತ್ತ ಒಡೆಯರ್, ಶಾಸಕರಾದ ಎ. ಮಂಜು, ಜಿ.ಡಿ. ಹರೀಶ್ ಗೌಡ, ಸಿ.ಎನ್.ಮಂಜೇಗೌಡ, ಮಾಜಿ ಶಾಸಕರಾದ ಮಹದೇವು, ಅಶ್ವಿನ್ ಕುಮಾರ್, ಜೆಡಿಎಸ್ ಹಿರಿಯ ಮುಖಂಡ ಕೃಷ್ಣನಾಯಕ, ಕೋಲಾರ ಸಂಸದ ಮಲ್ಲೇಶ್ ಬಾಬು ಹಾಗೂ ವಾಣಿಜ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಇದ್ದರು.

ಸಭೆಯ ನಂತರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಸಾ.ರಾ. ಮಹೇಶ್, ಸೋಮವಾರದಿಂದ ತಂಬಾಕು ಖರೀದಿಗೆ ಸಚಿವ ಪಿಯೂಷ್ ಗೋಯಲ್ ಸೂಚನೆ ನೀಡಿದರು. ಜೊತೆಗೆ, 190 ದೇಶಗಳ ರಾಯಭಾರಿಗಳಿಗೆ ಪತ್ರ ಬರೆದು ಮುಕ್ತ ಅವಕಾಶ ತುಂಬಾ ಖರೀದಿಗೆ ಕೋರಿಕೆ ಸಲ್ಲಿಸಲಾಗುವುದು. ಈವರೆಗೆ ರಪ್ತು ಮಾಡದಿರುವ ದೇಶಗಳಿಗೆ ತುಂಬಾ ರಪ್ತು ಮಾಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವರು ಭರವಸೆ ನೀಡಿರೋದಾಗಿ ಸಾ.ರಾ.ಮಹೇಶ್ ಹೇಳಿದ್ದಾರೆ.

ಶಾಸಕ ಎ. ಮಂಜು ಮಾತನಾಡಿ, ಕರ್ನಾಟಕದಲ್ಲಿ 100 ಮಿಲಿಯನ್ ಟನ್ ತುಂಬಾಕು ಬೆಳೆಯಲು ತುಂಬಾಕು ಮಂಡಳಿ ಅವಕಾಶ ನೀಡಿದೆ. ಈ ವರ್ಷ 80 ಮಿಲಿಯನ್ ಟನ್ ತುಂಬಾಕು ಬೆಳೆಯಲಾಗಿದೆ. ನಾವು ಬೆಳೆದ ಸೊಪ್ಪನ್ನು ಸರ್ಕಾರ ಮಾಡಿದ ಬೆಲೆಯಲ್ಲಿ ಖರೀದಿ ಮಾಡಬೇಕಾಗಿದೆ. ಈ ಹಿಂದೆ ಖರೀದಿ ಭರವಸೆ ನೀಡಿದ ಕಂಪನಿಗಳು ಖರೀದಿ ಮಾಡಿಲ್ಲ. ಹೀಗಾಗಿ ಈಗ ಬೆಳೆದ ಸೊಪ್ಪನ್ನು ಕೂಡಲೇ ಖರೀದಿಸಬೇಕು. ಕೇಂದ್ರ ಸರ್ಕಾರ ಇದರಲ್ಲಿ ಪ್ರವೇಶ ಮಾಡಬೇಕು ಎಂದು ಮನವಿ ಮಾಡಿರೋದಾಗಿ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *