ವೃದ್ಧನ ಹತ್ಯೆಗೈದ ಆರೋಪಿ ಪರಶಿವಮೂರ್ತಿ, ಸಿದ್ದರಾಜು ಮತ್ತು ಮಹೇಶ್
ಚಾಮರಾಜನಗರ, ನವೆಂಬರ್ 14: ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ (ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ) ಬಳಿ ಮಂಗಳವಾರ (ನ.11) ಸ್ವಾಮಿ (70) ಎಂಬ ವೃದ್ಧನ ಶವವೊಂದಿತ್ತು. ಮೈಮೇಲಿನ ಬಂಗಾರವನ್ನೂ ದೋಚಲಾಗಿದೆ. ಶವವನ್ನು ನೋಡಿದ್ದ ಮೃತರ ಹೆಂಡತಿ, ಸ್ವಾಮಿಯನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆಂದು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಶವದ ಮೇಲಿನ ಚಿನ್ನಾಭರಣ ದೋಚಿದ್ದ ಆರೋಪಿಗಳು
ಜಮೀನಿನ ಪಕ್ಕದ ರಾಷ್ಟ್ರೀಯ ಹೆದ್ದಾರಿಯ ಬಳಿ ಬಿದ್ದಿದ್ದ ಸ್ವಾಮಿಯ ಶವವನ್ನು ನೋಡಿದ್ದ ಪತ್ನಿ, ಗಂಡನ ಮೈಮೇಲಿನ ಚಿನ್ನಾಭರಣಗಳು ನಾಪತ್ತೆಯಾಗಿದ್ದರು. ಶವದ ಕುತ್ತಿಗೆಯ ಸುತ್ತ ಟವೆಲ್ ಸುತ್ತಿದ್ದು, ಅದು ಸ್ವಾಮಿಗೆ ಸೇರಿದ್ದಲ್ಲವೆಂದು ತಿಳಿದ ಮೇಲೆ ಪೊಲೀಸರು ಮೊರೆಹೋಗಿದ್ದರು. ಪ್ರಕರಣದ ಹಿನ್ನೆಲೆ ತೊಂಡವಾಡಿ ಗ್ರಾಮದ ನಿವಾಸಿ ಪರಶಿವಮೂರ್ತಿ, ಆರೋಪಿ ಸಿದ್ದರಾಜು ಹಾಗೂ ಬೆಳಚಲವಾಡಿ ಗ್ರಾಮದ ಮಹೇಶ್ ಎಂಬ ಮೂವರು ಆರೋಪಿಗಳನ್ನು ಪೊಲೀರು ಬಂದಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಮೃತರ ಬಳಿ ಆರೋಪಿ ಪರಶಿವಮೂರ್ತಿ ಹತ್ತು ಸಾವಿರ ಸಾಲ ಪಡೆದಿದ್ದ. ಸಾಲ ಮರುಪಾವತಿಸುವಂತೆ ಕೇಳಿದ್ದಕ್ಕೆ ಸ್ನೇಹಿತರೊಡನೆ ಸೇರಿ ವೃದ್ಧನನ್ನು ಕೊಲೆ ಮಾಡಿದ್ದು ತನಿಖೆಯಲ್ಲಿ ತಿಳಿದು ಬಂದಿದೆ. ಬಂಧಿತರಿಂದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.
ನಡೆದಿದ್ದೇನು?
ಸೋಮವಾರದಂದು ಮನೆಯಿಂದ ಹೊರಗೆ ಹೋಗಿದ್ದ ಸ್ವಾಮಿ, ಕತ್ತಲಾದರೂ ವಾಪಾಸ್ ಆಗದ ಕಾರಣ ಅವರ ಪತ್ನಿ ಆತಂಕಕ್ಕೊಳಗಾಗಿದ್ದರು. ಸ್ಥಳೀಯರೊಬ್ಬರೊಡನೆ ಹುಡುಕಿದರೂ ಸ್ವಾಮಿಯ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಸ್ವಾಮಿಯ ಅಣ್ಣನ ಮಗ ಸೋಮನಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಮರುದಿನ ಬೆಳಗ್ಗೆ ಕರೆ ಮಾಡಿದ್ದ ಸೋಮ, ಸ್ವಾಮಿ ಕಮರಹಳ್ಳಿ ಗ್ರಾಮದ ಪಕ್ಕದ ರಾಷ್ಟ್ರೀಯ ಹೆದ್ದಾರಿ ಬಳಿ ಕೊಲೆ ಮಾಡಿರುವುದಾಗಿ ತಿಳಿಸಿದ್ದ. ಇದನ್ನು ಕೇಳಿ ಸ್ಥಳಕ್ಕೆ ಧಾವಿಸಿದ ಮೃತರ ಪತ್ನಿ, ಶವದ ಕುತ್ತಿಗೆಯನ್ನು ಒಂದು ಟವೆಲ್ನಿಂದ ಬೀಗಿದಿರುವುದನ್ನು ಕಂಡಿದ್ದರು. ಅದರೊಡನೆ ಸ್ವಾಮಿ ಧರಿಸಿದ್ದ ಸುಮಾರು 100 ಗ್ರಾಂ ಗೂ ಅಧಿಕ ಚಿನ್ನಾಭರಣ ಕಾಣೆಯಾಗಿರುವುದನ್ನು ಗಮನಿಸಿದ್ದರು. ಈ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 11:51 am, ಶುಕ್ರ, 14 ನವೆಂಬರ್ 25