ಚಾಮರಾಜನಗರ, ನವೆಂಬರ್ 27: ಕರ್ನಾಟಕ ತಮಿಳುನಾಡು ಗಡಿ ಪ್ರದೇಶವಾದ ಎತ್ತಿಗಟ್ಟಿ ಸಮೀಪ ಬರೋಬ್ಬರಿ 20ಕ್ಕೂ ಅಧಿಕ ಕಾಡಾನೆಂಡು ಜಮೀನುಗಳಿಗೆ ಲಗ್ಗೆ ಇಟ್ಟಿದ್ದು, ರೈತರು ಬೆಚ್ಚಿಬೀಳುವಂತೆ ಮಾಡಿದ್ದಾರೆ. ಈ ಆನೆಗಳು ಯಾವಾಗ ಬೇಕಾದರೂ ಗ್ರಾಮಕ್ಕೆ ನುಗ್ಗುವ ಆತಂಕ ಎದುರಾಗಿದ್ದು, ಕರ್ನಾಟಕ ಹಾಗೂ ತಮಿಳುನಾಡು ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆಗೆ ಮನವಿ ಮಾಡಲಾಗಿದೆ. ಒಂದು ವೇಳೆ 20ಕ್ಕೂ ಹೆಚ್ಚು ಕಾಡಾನೆಗಳು ಗ್ರಾಮಕ್ಕೆ ನುಗ್ಗಿದರೆ ಪ್ರಾಣಪಾಯದ ಭೀತಿ ಇದೆ. ಬೈಕ್ ಸವಾರನ ಮೊಬೈಲ್ ಕ್ಯಾಮರದಲ್ಲಿ ಸೆರೆಯಾದ 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ರಸ್ತೆ ದಾಟುವ ದೃಶ್ಯ ಇಲ್ಲಿದೆ ನೋಡಿ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ