ಚಾಮರಾಜನಗರ, ಜನವರಿ 24: ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ (ಮಲೆ ಮಹದೇಶ್ವರ) ಚಿರತೆ (ಚಿರತೆ) ದಾಳಿಗೆ ಮಾದಪ್ಪನ ಭಕ್ತನೊಬ್ಬ ಬಲಿಯಾದ ಘಟನೆ ಹಿನ್ನೆಲೆ, ಚಾಮರಾಜನಗರ ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಹೊಸ ಆದೇಶವನ್ನು ಹೊರಡಿಸಲಾಗಿದೆ. ಪಾದಯಾತ್ರಿಕರು, ದ್ವಿಚಕ್ರ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಕ್ರಮಕೈಗೊಂಡಿರುವ ಈ ಆದೇಶ ಜನವರಿ 25ರಿಂದ ಜಾರಿಗೆ ಬರಲಿದೆ.
ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ, ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತರು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ.
ಬೆಳಗ್ಗೆ 7ರಿಂದ ಸಂಜೆ 4ರವರೆಗೆ ಮಾತ್ರ ಅವಕಾಶ
ಚಿರತೆ ದಾಳಿ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದು ಜನವರಿ 24 ರಿಂದ ಸಂಜೆ 6 ರಿಂದ ಬೆಳಗ್ಗೆ 6ರವರೆಗೆ ಪಾದಯಾತ್ರೆಗೆ ನಿರ್ಬಂಧ ಹೇರಿತ್ತು. ಆದರೆ ಇದೀಗ ಪಾದಯಾತ್ರಿಗರಿ ಪ್ರಸ್ತುತ ಡೈಡ್‌ಲೈನ್ ನೀಡಲಾಗಿದೆ. ನಾಳೆಯಿಂದ ಬೆಳಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಾತ್ರ ಪಾದಯಾತ್ರಿಕರಿಗೆ ಹಾಗೂ ದ್ವಿಚಕ್ರ ವಾಹನಕ್ಕೆ ಅವಕಾಶ ನೀಡಲಾಗುತ್ತದೆ.
ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತನ ಕತ್ತು ಸೀಳಿ ಕೊಂಡು ಹೊತ್ತೊಯ್ದಿದ್ದ ಚಿರತೆ ಕೊನೆಗೂ ಸೆರೆ
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಬೆಳಗ್ಗೆ ಮಂಡ್ಯ ಜಿಲ್ಲೆ ಚೀರನಹಳ್ಳಿ ಮೂಲದ ಪ್ರವೀಣ್ ಎಂಬ ಭಕ್ತನ ಮೇಲೆ ಚಿರತೆ ದಾಳಿ ನಡೆಸಿ ತಿಂದ ಘಟನೆ ನಡೆದಿದೆ. ಈ ಘಟನೆಯ ಬಳಿಕ ತಕ್ಷಣವೇ ಕ್ರಮಕೈಗೊಂಡಿದ್ದು, ಮೊದಲ ಹಂತದಲ್ಲಿ ಸಂಜೆ 6 ರಿಂದ ಬೆಳಗ್ಗೆ 6 ಗಂಟೆಯವರೆಗೆ ಪಾದಯಾತ್ರೆಗೆ ನಿರ್ಬಂಧ ವಿಧಿಸಲಾಗಿದೆ. ಈ ಜನವರಿ 24 ರವರೆಗೆ ನಿರ್ಬಂಧವನ್ನು ವಿಧಿಸಲಾಗಿದೆ.
ಇದನ್ನೂ ಓದಿ: ಕಾಪಾಡಲಿಲ್ಲ ಮಹದೇಶ್ವರ: ಚಿರತೆ ದಾಳಿಗೆ ಭಕ್ತ ಬಲಿ; ಪಾದಯಾತ್ರೆಗೆ 4 ದಿನಗಳ ಕಾಲ ನಿರ್ಬಂಧ
ಚಿರತೆ ದಾಳಿ ಸಂಭವಿಸುವ ಮೊದಲು ಪಾದಯಾತ್ರಿಕರು ಮತ್ತು ದ್ವಿಚಕ್ರ ವಾಹನಗಳಿಗೆ 24 ಗಂಟೆಗಳ ಕಾಲವೂ ಸಂಚಾರಕ್ಕೆ ಅವಕಾಶವಿತ್ತು. ಆದರೆ ಇತ್ತೀಚಿನ ದುರ್ಘಟನೆಗೆ ಹೊಸ ಸಮಯ ಮಿತಿಯನ್ನು ವಿಧಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.