ಬೀದಿನಾಯಿಗಳ ದಾಳಿಗೆ ಬೆಚ್ಚಿಬಿದ್ದ ಸೂರ್ಯನಗರ ಜನ: ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಕಿಡಿ

ಬೀದಿನಾಯಿಗಳ ದಾಳಿಗೆ ಬೆಚ್ಚಿಬಿದ್ದ ಸೂರ್ಯನಗರ ಜನ: ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಕಿಡಿ


ಬೀದಿನಾಯಿಗಳ ದಾಳಿಗೆ ಬೆಚ್ಚಿಬಿದ್ದ ಸೂರ್ಯನಗರ ಜನ: ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಕಿಡಿ

ಆನೇಕಲ್, ಏಪ್ರಿಲ್ 01: ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಸೂರ್ಯನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ, ಶ್ವಾನಗಳ ಕಾಟಕ್ಕೆ ಸ್ಥಳೀಯ ನಿವಾಸಿಗಳು ಹೈರಾಣಾಗಿದ್ದಾರೆ. ಗುಂಪು ಗುಂಪಾಗಿ ರಸ್ತೆಗಳಲ್ಲಿ ಬೀಡುಬಿಟ್ಟಿರುವ ರಕ್ಕಸ ಬೀದಿನಾಯಿಗಳು ಮನೆ ಮುಂದೆ ಆಟವಾಡುವ ಮಕ್ಕಳು, ವಾಕಿಂಗ್ ಮಾಡುವ ಮಹಿಳೆಯರು ಸೇರಿದಂತೆ ಪಾದಚಾರಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಬೈಕ್ ಸವಾರರನ್ನೂ ಅಡ್ಡಗಟ್ಟಿ ಅಟ್ಯಾಕ್ ಮಾಡುತ್ತಿದ್ದಾರೆ. ದಿನನಿತ್ಯ ಇವುಗಳ ದಾಳಿಯಿಂದ ಸಾರ್ವಜನಿಕರು ಆಸ್ಪತ್ರೆಗೆ ಅಲೆದಾಡುವಂತಾಗಿದೆ. ಆದರೆ ಪಾಲಿಕೆ ಅಧಿಕಾರಿಗಳು ಮಾತ್ರ ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದ್ದು, ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಬೀದಿ ನಾಯಿಗಳ ಉಪಟಳದಿಂದ ಕಂಗೆಟ್ಟಿರುವ ಸ್ಥಳೀಯ ನಿವಾಸಿಗಳು ಅಧಿಕಾರಿಗಳು, ಸೂರ್ಯನಗರ ಪೊಲೀಸ್ ಠಾಣೆ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳಿಗೆ ಈ ಬಗ್ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ನಿತ್ಯ ಬೆಳಗ್ಗೆ ಮತ್ತು ಸಂಜೆ ಬೀದಿ ನಾಯಿಗಳು ಸಿಕ್ಕಸಿಕ್ಕವರ ಮೇಲೆ ಡೆಡ್ಲಿ ದಾಳಿ ನಡೆಸುತ್ತಿವೆ. ಇವುಗಳನ್ನು ಹಿಡಿದು ಬೇರೆಡೆ ಸ್ಥಳಾಂತರ ಮಾಡುವಂತೆ ದೂರು ನೀಡಿದರೆ ಕೆಲವರು ಪ್ರಾಣಿ ದಯಾ ಸಂಘದ ಹೆಸರಿನಲ್ಲಿ ನಮಗೆ ಧಮ್ಕಿ ಹಾಕುತ್ತಿದ್ದಾರೆ. ಹೀಗಾಗಿ ಬೀದಿ ನಾಯಿಗಳ ಹಾವಳಿಯಿಂದ ನೆಮ್ಮದಿ ಇಲ್ಲ. ಚಂದಾಪುರ ಪುರಸಭೆ ಅಧಿಕಾರಿಗಳು ಮಾತ್ರ ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ನೀಡಲಾಗಿದೆ. ರೆಬೀಸ್ ವ್ಯಾಕ್ಸಿನೇಷನ್ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಬೀದಿನಾಯಿಗಳ ಹಾವಳಿ ನಿಯಂತ್ರಣ ಮಾಡುವುದಾಗಿ ಹೇಳಿಕೊಂಡು ಸಮಯ ಕಳೆಯುತ್ತಿದ್ದಾರೆ ಎಂಬುದು ನಿವಾಸಿಗಳ ಆರೋಪ.

ಇದನ್ನೂ ಓದಿ: ಬೀದಿ ನಾಯಿ, ಸಾಕು ನಾಯಿಗಳಿಗಾಗಿ ವಿಶೇಷ ಪೂಜೆ! ಅಪಾರ್ಟ್ಮೆಂಟ್ ನಿವಾಸಿಗಳಿಂದ ಕಾಲಭೈರವ, ದತ್ತಾತ್ರೇಯ ಪೂಜೆ

ಸೂರ್ಯನಗರ ಕರ್ನಾಟಕ ಗೃಹ ಮಂಡಳಿ ನಿರ್ಮಾಣ ಮಾಡಿರುವ ಪ್ರತಿಷ್ಠಿತ ಬಡಾವಣೆ, ಇಲ್ಲಿ ಮೂಲ ಸೌಕರ್ಯ ಸೇರಿದಂತೆ ಸುರಕ್ಷತೆ ದೃಷ್ಟಿಯಿಂದ ಜನ ನೆಲೆಸಿದ್ದರು. ಕಳೆದ ಹಲವು ದಿನಗಳಿಂದ ಬೀದಿ ನಾಯಿಗಳ ಕಾಟಕ್ಕೆ ನಿವಾಸಿಗಳು ಹೈರಾಣಾಗಿದ್ದರೆ, ಅಧಿಕಾರಿಗಳು ಬೇಜವಾಬ್ದಾರಿ ಕಂಗಾಲಾಗಿದ್ದಾರೆ. ಬಡಾವಣೆ ಬೀದಿನಾಯಿಗಳ ಅಡ್ಡೆಯಾಗಿ ಮಾರ್ಪಾಡಾಗಿರುವ ಕಾರಣ, ಸಾವು ನೋವು ಸಂಭವಿಸುವ ಮುನ್ನ ಕರ್ನಾಟಕ ಗೃಹ ಮಂಡಳಿ ಮತ್ತು ಚಂದಾಪುರ ಪುರಸಭೆ ಅಧಿಕಾರಿಗಳು ಬೀದಿ ನಾಯಿಗಳ ಹಾವಳಿಗೆ ಬ್ರೇಕ್ ಹಾಕಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *