Headlines

ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ

ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ


ಬೆಂಗಳೂರು, ಫೆಬ್ರವರಿ 22: ಗುತ್ತಿಗೆದಾರರಿಂದ 5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕರು ಲಮಾಣಿಗೆ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ಗೆ ಆದೇಶ ನೀಡಲಾಗಿದೆ. ಯಲಹಂಕ ಜುಡಿಷಿಯಲ್ ಲೇಔಟ್ನಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಶಾಸಕರನ್ನು ಲೋಕಾಯುಕ್ತ ನ್ಯಾಯಾಲಯ ಹಾಜರುಪಡಿಸಿದ್ದರು. ನ್ಯಾಯಾಧೀಶರ ಆದೇಶದ ಅನ್ವಯ ಬಿಜೆಪಿ ಶಾಸಕ ಚಂದ್ರು ಲಮಾಣಿಯೀಗ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಪಿಎ ಮಂಜುನಾಥ್, ಸಂಬಂಧಿ ಗುರು ಲಮಾಣಿಗೂ ನ್ಯಾಯಾಂಗ ಬಂಧನ ವಿಧಿಸಿ ಜಡ್ಜ್ ಆದೇಶಿಸಿದ್ದಾರೆ.

ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ, ಸರ್ಕಾರಿ ಪಿಎ ಮಂಜುನಾಥ್ ಮತ್ತು ಖಾಸಗಿ ಪಿಎ ಗುರುವಿಗೆ ವೈದ್ಯಕೀಯ ತಪಾಸಣೆ ಬಳಿಕ ಲೋಕಾಯುಕ್ತ ಪೊಲೀಸರು ಅವರನ್ನು ಬೆಂಗಳೂರಿಗೆ ಕರೆ ತಂದಿದ್ದರು.

(ಮಾಹಿತಿ ಅಪ್‌ಡೇಟ್ ಆಗುತ್ತಿದೆ.)

ರಂದು ಪ್ರಕಟಿಸಲಾಗಿದೆ – 2:11 pm, ಭಾನುವಾರ, 22 ಫೆಬ್ರವರಿ 26



Source link

Leave a Reply

Your email address will not be published. Required fields are marked *