
ಆನೇಕಲ್, ಮಾರ್ಚ್ 15: ಆನೇಕಲ್ ತಾಲೂಕಿನ ಬನ್ನೇರುಘಟ್ಟ ನೈಸ್ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸಾವನ್ನಪ್ಪಿದೆ. ಈ ಘಟನೆ ಶನಿವಾರ ರಾತ್ರಿ ಸುಮಾರು ಒಂದು ಗಂಟೆ ವೇಳೆಗೆ ನಡೆದಿರುವುದು. ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಗಂಭೀರವಾಗಿದೆ, ರಸ್ತೆಯ ಕೆಳಭಾಗಕ್ಕೆ ಬಿದ್ದಿತ್ತು. ಸ್ಥಳದಲ್ಲೇ ಚಿರತೆ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು. ಇದು ಸುಮಾರು ಮೂರು ವರ್ಷದ ಹೆಣ್ಣು ಚಿರತೆ ಎಂದು ಗುರುತಿಸಲಾಗಿದೆ. ಕಗ್ಗಲೀಪುರ ಅರಣ್ಯ ವಲಯದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತ ಚಿರತೆಯನ್ನು ವಶಕ್ಕೆ ಪಡೆದು ಅರಣ್ಯ ಇಲಾಖೆ ಕಚೇರಿಗೆ ಸಾಗಿಸಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ