ಕೋಲಾರ, (ನವೆಂಬರ್ 24): ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ (ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ) ಕಾರು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರದ ಮಾಲೂರು (ಮಾಲೂರು) ತಾಲ್ಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ. ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಬಳಿಕ ಬ್ರಿಡ್ಜ್ ನಿಂದ ಕೆಳಗೆ ಬಿದ್ದಿದೆ. ಈ ದುರ್ಘಟನೆಯಲ್ಲಿಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತರಾಗಿದ್ದು, ಇವರೆಲ್ಲರೆಲ್ಲ ಚೆನ್ನೈ ಮೂಲದವರು.
ಕಾರು ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದ ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಕೋಲಾರದ ಅರ್ ಎಲ್ ಜಾಲಪ್ಪ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಯುವಕರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಿಡ್ಜ್ ಮೇಲಿಂದ ನಾಲ್ಕು ಗಾಲಿಗಳ ಮೇಲೆ ಮಾಡಿ ಕಾರು ಬಿದ್ದಿದೆ. ಇನ್ನು ಡಿವೈಡರ್ ಗೆ ಡಿಕ್ಕಿ ಹೊಡೆದು ಬಳಿಕ ಬ್ರಿಡ್ಜ್ ಮೇಲಿಂದ ಕೆಳಗುರುಳಿದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.