
ವಿಜಯನಗರ, ಫೆ.13: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯಲ್ಲಿ ಮೂರು ದಿನಗಳ ಹಂಪಿ ಉತ್ಸವ 2026ಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಸಾಂಪ್ರದಾಯಿಕ ಡೊಳ್ಳು ಮತ್ತು ನಗರಿ ಬಾರಿಸುವ ಮೂಲಕ ಈ ಭವ್ಯ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಧ್ವನಿ ಮತ್ತು ಬೆಳಕನ್ನು ಸಹ ಮುಖ್ಯಮಂತ್ರಿಗಳು ಗಣ್ಯರು ಉದ್ಘಾಟಿಸಿದರು. ಈ ಧ್ವನಿ ಮತ್ತು ಬೆಳಕು ಕಾರ್ಯಕ್ರಮವು ಅಂತರರಾಷ್ಟ್ರೀಯ ಮಟ್ಟದ ಕಾಲೇಜು ಟಾರ್ಚ್ ಮಾದರಿಯಲ್ಲಿ ಹಂಪಿಯ ವಿಶಿಷ್ಟ ಸಂದೇಶವನ್ನು ವಿಶ್ವಕ್ಕೆ ಸಾರಲಿದೆ. ಸಾರ್ವಜನಿಕರನ್ನು ತಮ್ಮ ಮೊಬೈಲ್ ಫೋನ್ ಟಾಚ್ಗಳನ್ನು ಮಾಡುವ ಮೂಲಕ ಬೆಳಕಿನ ಪ್ರದರ್ಶನದಲ್ಲಿ ಭಾಗವಹಿಸುವಂತೆ ಕೋರಲಾಯಿತು. ಈ ಉತ್ಸವವು ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಮರುಕಳಿಸುವ ಮತ್ತು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಕರ್ನಾಟಕದ ಪ್ರಗತಿಯನ್ನು ದೇಶಾದ್ಯಂತ ಸಾರುವ ಉದ್ದೇಶವನ್ನು ಹೊಂದಿದೆ. ನಗಾರಿ ಮತ್ತು ಬೆಳಕಿನ ಸಮಾಗಮವು ಐತಿಹಾಸಿಕ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಭವ್ಯ ಕ್ಷಣಕ್ಕೆ ಸಾಕ್ಷಿಯಾಯಿತು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ