Headlines

ಚಿಕ್ಕಬಳ್ಳಾಪುರ: ಮೊಮ್ಮಗಳ 40 ದಿನದ ಶಿಶುವನ್ನೇ ಕೊಂದಳೇ ಅಜ್ಜಿ? ಚೇಳೂರಿನಲ್ಲಿ ಮರ್ಯಾದಾ ಹತ್ಯೆ ಶಂಕೆ

ಚಿಕ್ಕಬಳ್ಳಾಪುರ: ಮೊಮ್ಮಗಳ 40 ದಿನದ ಶಿಶುವನ್ನೇ ಕೊಂದಳೇ ಅಜ್ಜಿ? ಚೇಳೂರಿನಲ್ಲಿ ಮರ್ಯಾದಾ ಹತ್ಯೆ ಶಂಕೆ


ಸಾಂದರ್ಭಿಕ ಚಿತ್ರ (ಒಳಚಿತ್ರದಲ್ಲಿ ಆರೋಪಿ)

ಚಿಕ್ಕಬಳ್ಳಾಪುರ, ಡಿಸೆಂಬರ್ 25: ಚಿಕ್ಕಬಳ್ಳಾಪುರ (ಚಿಕ್ಕಬಳ್ಳಾಪುರ) ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 40 ದಿನದ ನವಜಾತ ಗಂಡು ಶಿಶು ಸಾವಿನ ಪ್ರಕರಣ ಇದೀಗ ತೀವ್ರ ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆಯಲ್ಲಿ ಮರ್ಯಾದೆ ಹತ್ಯೆ ಶಂಕೆ ವ್ಯಕ್ತವಾಗಿದ್ದು, ಶಿಶುವಿನ ಸಾವಿನಲ್ಲಿ ಅಜ್ಜಿಯ ಕೈವಾಡವಿರಬಹುದೆಂಬ ಆರೋಪ ಕೇಳಿಬಂದಿದೆ. ಅಪ್ರಾಪ್ತ ಮೊಮ್ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಕ್ಕೆ ದ್ವೇಷ ಹೊಂದಿದ್ದ ಅಜ್ಜಿ, ಮೊಮ್ಮಗಳ 40 ದಿನದ ನವಜಾತ ಶಿಶುವನ್ನು ಕೊಂದಿರಬಹುದೆಂಬ ಶಂಕೆ ಇದೆ. ಪ್ರೀತಿಸಿಯಾದ ಮದುವೆ ದಂಪತಿಗೆ ಜನಸಿದ್ದ ಗಂಡು ಮಗು ಡಿಸೆಂಬರ್ 21 ರಂದು.

ಸಾವು ಸಂಭವಿಸಿದ ವೇಳೆ ಮಗು ಅಜ್ಜಿ ಬಳಿ ಇತ್ತು. ಆದರೆ, ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಅಜ್ಜಿ ವಾದಿಸಿದ್ದಾಳೆ. ಆದರೆ ತನ್ನ ಮಗುವಿನ ಸಾವಿನಲ್ಲಿ ಅಜ್ಜಿಯ ಕೈವಾಡವಿದೆ ಎಂಬ ಅನುಮಾನ ವ್ಯಕ್ತಪಡಿಸಿದ 17 ವರ್ಷದ ಅಪ್ರಾಪ್ತ ಬಾಲಕಿ, ಚೇಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಈ ದೂರಿನ ಆಧಾರದ ಮೇಲೆ ಬಿಎನ್ಎಸ್ 194 ಸೆಕ್ಷನ್ ಅಡಿ ಯುಡಿಆರ್ (ಅಸಹಜ ಸಾವು) ಪ್ರಕರಣವನ್ನು ದಾಖಲಿಸಲಾಗಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿ ನವಜಾತ ಶಿಶುವಿನ ಮೃತದೇಹವನ್ನು ಹೊರತೆಗೆಯಲಾಯಿತು, ಚೇಳೂರು ತಹಶಿಲ್ದಾರ್ ಶ್ವೇತಾ ಅವರ ನೇತೃತ್ವದಲ್ಲಿ ಮರಣೋತ್ತರ ಶವ ಪರೀಕ್ಷೆ ನಡೆಸಲಾಗಿದೆ.

ಹಿಂದೂ ಯುವಕನ ವಿರುದ್ಧ ಪೋಕ್ಸೋ ಕೇಸ್

ಇನ್ನೊಂದೆಡೆ, ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆ ಮಾಡಿಕೊಂಡಿರುವ ಹಿಂದೂ ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಅಪ್ರಾಪ್ತ ಬಾಲಕಿಯ ಮದುವೆ ಹಾಗೂ ಶಿಶು ಸಾವಿನ ಪ್ರಕರಣಗಳು ಇದೀಗ ಚೇಳೂರು ಪಟ್ಟಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಮನೆಗೆ ನುಗ್ಗಿ ಹೊಡೆಯುವುದು, ಅಂಗಲಾಚಿದರೂ ಯಾರೂ ನೆರವಿಗೆ ಬಂದಿಲ್ಲ: ಗರ್ಭಿಣಿ ಹತ್ಯೆ ಬಗ್ಗೆ ಪತಿ ವಿವೇಕಾನಂದ ಕಣ್ಣೀರ ಮಾತು

ನವಜಾತ ಶಿಶುವಿನ ಮರಣಕ್ಕೆ ನಿಖರವಾದ ಕಾರಣ ಏನು, ಅಜ್ಜಿಯ ಪಾತ್ರವಿದೆಯೇ ಎಂದು ವೈದ್ಯರು ಮರಣೋತ್ತರ ವರದಿ ಮಾಡುತ್ತಿದ್ದಾರೆ. ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *