ಬಾಬಾ ಬುಡನ್ ಸ್ವಾಮಿ ದರ್ಗಾದ ನಿಷೇಧಿತ ಸ್ಥಳದಲ್ಲಿ ಮಾಂಸಾಹಾರ ಸೇವಿಸಿದ ಮುಸ್ಲಿಂ ಕುಟುಂಬ
ಚಿಕ್ಕಮಗಳೂರು, ನವೆಂಬರ್ 1: ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಿನ್ನೆಲೆಯಲ್ಲಿ ಮತ್ತೆ ವಿವಾದ (ಬಾಬಾಬುಡನ್ಗಿರಿ ಇನಾಂ ದತ್ತ ಪೀಠ) ಎದ್ದಿದೆ. ನಿಷೇಧಿತ ಹೋಮ ಮಂಟಪದ ಪಕ್ಕದಲ್ಲೇ ಮುಸ್ಲಿಂ ಕುಟುಂಬ ಮಾಂಸಾಹಾರ ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈ ವಿವಾದಿತ ಪ್ರದೇಶದ 200 ಮೀಟರ್ ಮಾಂಸಾಹಾರ ಸೇವನೆಗೆ ಪೂರ್ವದಲ್ಲೇ ನಿಷೇಧ ಹೇರಿತ್ತು. ಆದರೂ ನಿಯಮ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಈ ದೃಶ್ಯಗಳು ಆಕ್ರೋಶಕ್ಕೆ ಕಾರಣವಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಪ್ರಸ್ತುತ ಪರಿಸ್ಥಿತಿ ಶಾಂತವಾಗಿದೆ ಎಂದು ತಿಳಿಸಲಾಗಿದೆ.
ಈ ಹಿಂದೆಯೂ ಹಲವು ವಿವಾದಕ್ಕೆ ಸಿಲುಕಿದ್ದ ಬಾಬಾ ಬುಡನ್ ಸ್ವಾಮಿ ದರ್ಗಾ
ಬಾಬಾಬುಡನ್ ಗಿರಿ ಅಥವಾ ಶ್ರೀಗುರುದತ್ತಾತ್ರೇಯ ಯಾರಿಗೆ ಸೇರಿದ್ದು ಎಂಬ ವಾದ ವಿವಾದಗಳು ಹಲವು ಬಾರಿ ಕೇಳಿ ಬಂದಿತ್ತು. ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಮೂಲ ಸರ್ಕಾರಿ ದಾಖಲಾತಿಗಳಲ್ಲಿ ಹೆಸರಾಗಿದ್ದರೆ, ಈ ಸ್ಥಳವನ್ನು ಬಾಬಾ ಬುಡನ್ ಗಿರಿ ಎಂದೂ ಮತ್ತು ಇನಾಂ ದತ್ತಾತ್ರೇಯ ಪೀಠ ಎಂದೂ ಕರೆಯುತ್ತಾರೆ. 2022 ರಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿದ್ದ ಈ ಧಾರ್ಮಿಕ ಕೇಂದ್ರ ನಮ್ಮದು ಎಂದು ಎರಡೂ ಧರ್ಮದವರ ಮಧ್ಯೆ ವಿವಾದ ಸೃಷ್ಟಿಯಾಗಿತ್ತು.
ಇದನ್ನೂ ಓದಿ ಮತ್ತೆ ಮುನ್ನೆಲೆಗೆ ಬಂದ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದ: ಹಿಂದೂ ಸಂಘಟನೆಗಳಿಂದ ಉತ್ಖನನಕ್ಕೆ ಪಟ್ಟು
ಹಾಗೆಯೇ 2025ರ ಆಗಸ್ಟ್ ಅಲ್ಲಿ ದತ್ತಪೀಠದಲ್ಲಿ ನಕಲಿ ಗೋರಿ ನಿರ್ಮಿಸಲಾಗಿದೆ ಎಂಬ ಆರೋಪ ಈ ಹಿಂದೆ ಕೇಳಿ ಬಂದಿತ್ತು. ಈ ಬಗ್ಗೆ ಸತ್ಯ ತಿಳಿಯಲು ಎಸ್‌ಐಟಿ ರಚನೆ ಮಾಡಿ, ಜಿಪಿಎಸ್‌ನ ಆಧುನಿಕ ತಂತ್ರಜ್ಞಾನವನ್ನು ಬಳಸಿ ಉತ್ಖನನ ಮಾಡುವಂತೆ ಹಿಂದೂ ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡುತ್ತವೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.